ಕ್ರಿಕೆಟ್

ಭಾರತದ ವೇಗಿಗಳು ವಿಶ್ವದಲ್ಲೇ ಅತ್ಯುತ್ತಮ: ದಕ್ಷಿಣ ಆಫ್ರಿಕಾ ವೇಗಿ ಡೇಲ್‌ ಸ್ಟೇನ್‌

ಪ್ರಸ್ತುತ ಭಾರತದ ವೇಗದ ಬೌಲಿಂಗ ತಂಡ ವಿಶ್ವ ಕ್ರಿಕೆಟ್ ನಲ್ಲೇ ಅತ್ಯುತ್ತಮವಾದದ್ದು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ, ಮಾಜಿ ನಂ.1 ಬೌಲರ್‌ ಡೇಲ್‌ ಸ್ಟೇನ್‌ ಅವರು ಗುಣಗಾನ ಮಾಡಿದ್ದಾರೆ.

ಭಾರತದ ವೇಗಿಗಳು ವಿಶ್ವದಲ್ಲೇ ಅತ್ಯುತ್ತಮ: ದಕ್ಷಿಣ ಆಫ್ರಿಕಾ ವೇಗಿ ಡೇಲ್‌ ಸ್ಟೇನ್‌
ಡೇಲ್ ಸ್ಟೇನ್
Published On :

ಜೊಹಾನ್ಸ್‌ಬರ್ಗ್: ಪ್ರಸ್ತುತ ಭಾರತದ ವೇಗದ ಬೌಲಿಂಗ ತಂಡ ವಿಶ್ವ ಕ್ರಿಕೆಟ್ ನಲ್ಲೇ ಅತ್ಯುತ್ತಮವಾದದ್ದು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ, ಮಾಜಿ ನಂ.1 ಬೌಲರ್‌ ಡೇಲ್‌ ಸ್ಟೇನ್‌ ಅವರು ಗುಣಗಾನ ಮಾಡಿದ್ದಾರೆ.

ಗುರುವಾರ ನಡೆದ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೇಲ್ ಸ್ಟೇನ್ ಅವರನ್ನು ಖರೀದಿಸಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ತಾಣ ಟ್ವೀಟರ್ ನಲ್ಲಿ ಅಭಿಮಾನಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಿಮ್ಮ ಪ್ರಕಾರ, ಸದ್ಯ ವಿಶ್ವದಲ್ಲಿ ಬೌಲಿಂಗ್ ನಲ್ಲಿ ಯಾವ ದೇಶದ ತಂಡ ಉತ್ತಮವಾಗಿದೆ ಎಂಬ ಅಭಿಮಾನಿಯೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟೇನ್, ಭಾರತ ಎಂದು ಉತ್ತರಿಸಿದ್ದಾರೆ.

ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡಲಿರುವ 36 ವರ್ಷದ ಸ್ಟೇನ್, 2010 ರಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರೊಂದಿಗಿನ ಹೋರಾಟದ ಬಗ್ಗೆ ನೆನಪಿಸಿಕೊಂಡಿದ್ದಾರೆ. ಅಲ್ಲದೆ ಭಾರತೀಯ ಶ್ರೇಷ್ಠ ಕ್ರಿಕೆಟಿಗನೊಂದಿಗಿನ ಆಟ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.