ಮತ್ತೊಂದು ವಿಶ್ವ ದಾಖಲೆ ಬರೆದ 'ಹಿಟ್ ಮ್ಯಾನ್' ರೋಹಿತ್ ಶರ್ಮಾ, ಜಯಸೂರ್ಯ ದಾಖಲೆ ಧೂಳಿಪಟ!
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.

ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಹೌದು..ಕಟಕ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ 9 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಅಂತಿಮ ಏಕದಿನ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿ 22 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದಿದ್ದಾರೆ.
ಇಷ್ಟಕ್ಕೂ ಯಾವುದು ಆ ವಿಶ್ವ ದಾಖಲೆ?
ಹಾಲಿ ವರ್ಷದಲ್ಲಿ ರೋಹಿತ್ ಶರ್ಮಾ ಆರಂಭಿಕರಾಗಿ ಈವರೆಗೂ 2,379 ರನ್ ಭಾರಿಸಿದ್ದು, ಇನ್ನು ಕೇವಲ 9 ರನ್ ಸಿಡಿಸಿದರೆ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಸನತ್ ಜಯಸೂರ್ಯ ಅವರ ದಾಖಲೆ ಮುರಿದಿದ್ದಾರೆ. ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿರುವ 22 ವರ್ಷ ಹಳೆಯ ದಾಖಲೆಯೊಂದನ್ನು ಒಲಿಸಿಕೊಳ್ಳಲು ಭಾರತದ ಆರಂಭಿಕ ರೋಹಿತ್ ಶರ್ಮಗೆ ಕೇವಲ 9 ರನ್ ಅಗತ್ಯವಿತ್ತು.
22 ವರ್ಷಗಳ ಹಿಂದೆ ಅಂದರೆ 1997ರಲ್ಲಿ ಜಯಸೂರ್ಯ ಆರಂಭಿಕ ಬ್ಯಾಟ್ಸ್ಮನ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ (ಏಕದಿನ ಮತ್ತು ಟೆಸ್ಟ್) ಒಟ್ಟು 2,387ರನ್ ಸಿಡಿಸಿದ್ದರು. ಟೆಸ್ಟ್ನಲ್ಲೂ ಆರಂಭಿಕರಾಗಿರುವ ರೋಹಿತ್ ಶರ್ಮ 2019ರಲ್ಲಿ ಇದುವರೆಗೆ 2,379 ರನ್ (ಏಕದಿನ, ಟೆಸ್ಟ್, ಟಿ20) ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


