ಬೀದಿಗೆ ಬಿತ್ತು ಡಿಡಿಸಿಎ ಜಗಳ, ಬಹಿರಂಗವಾಗಿಯೇ ಕೈಕೈ ಮಿಲಾಯಿಸಿದ ಸದಸ್ಯರು
ದೆಹಲಿ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯಲ್ಲಿನ ಆಂತರಿಕ ಜಗಳ ಬೀದಿಗೆ ಬಿದ್ದಿದ್ದು, ಆಂತರಿಕ ಬೇಗುದಿಯಿಂದ ಕುದಿಯುತ್ತಿದ್ದ ಸದಸ್ಯರು ಇದೀಗ ಬಹಿರಂಗವಾಗಿಯೇ ಕೈಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದ್ದಾರೆ.

ನವದೆಹಲಿ: ದೆಹಲಿ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯಲ್ಲಿನ ಆಂತರಿಕ ಜಗಳ ಬೀದಿಗೆ ಬಿದ್ದಿದ್ದು, ಆಂತರಿಕ ಬೇಗುದಿಯಿಂದ ಕುದಿಯುತ್ತಿದ್ದ ಸದಸ್ಯರು ಇದೀಗ ಬಹಿರಂಗವಾಗಿಯೇ ಕೈಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದ್ದಾರೆ.
ಹೌದು.. ಇಂದು ದೆಹಲಿಯಲ್ಲಿ ನಡೆದ ದೆಹಲಿ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ವಾರ್ಷಿಕ ಸಾಮಾನ್ಯಸಭೆ ಸದಸ್ಯರ ತೋಳ್ಬಲ ಪ್ರದರ್ಶನಕ್ಕೆ ವೇದಿಕೆಯಾಗಿತ್ತು. ಆಂತರಿಕ ಬೇಗುದಿಯಿಂದ ಕುದಿಯುತ್ತಿದ್ದ ಸದಸ್ಯರು ಇದೀಗ ಬಹಿರಂಗವಾಗಿಯೇ ಕೈಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದ್ದು, ನೋಡ ನೋಡುತ್ತಲೇ ಒಬ್ಬರ ಮೇಲೊಬ್ಬರು ಕೈ ಮಾಡಿದ್ದಾರೆ.
ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಡಿಡಿಸಿಎ ಜಂಟಿ ಕಾರ್ಯದರ್ಶಿ ರಾಜನ್ ಮಂಚಂಡ ಅವರೂ ಕೂಡ ಈ ಜಗಳದಲ್ಲಿ ಕಾಣಿಸಿಕೊಳ್ಳುವ ಮೂಲಕ ತೀವ್ರ ಟೀಕಿಗೆ ಗುರಿಯಾಗಿದ್ದಾರೆ. ಇನ್ನೂ ಅಚ್ಚರಿ ವಿಚಾರವೆಂದರೆ ಸಭೆ ಮುಕ್ತಾಯದ ಬಳಿಕ ಸಭೆ ಕುರಿತು ಟ್ವೀಟ್ ಮಾಡಿರುವ ಡಿಡಿಸಿಎ ಸಭೆಯಲ್ಲಿ ಪಾಲ್ಗೊಂಡ ಸದಸ್ಯರಿಗೆ ಧನ್ಯವಾದ ಹೇಳಿದೆ. ಆದರೆ ತನ್ನ ಪ್ರಕಟಣೆಯಲ್ಲಿ ಎಲ್ಲೂ ಕೂಡ ಜಗಳದ ಕುರಿತು ಉಲ್ಲೇಖವನ್ನೇ ಮಾಡದೇ ಇರುವುದು ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಒಟ್ಟಾರೆ ಡಿಡಿಸಿಎ ಸದಸ್ಯರ ಜಗಳ ಇದೀಗ ಮತ್ತೊಂದು ಹಂತಕ್ಕೆ ಏರಿದ್ದು, ಈ ಕುರಿತಂತೆ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಎಂತಹ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


