ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಬಳ್ಳಾರಿ ತಂಡದ ಇಬ್ಬರು ಆಟಗಾರರ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ ಪೊಲೀಸರ ಬಲೆಗೆ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರು ಸಿಕ್ಕಿಬಿದ್ದಿದ್ದಾರೆ.
Sಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದಾಗಿ ಆಟಗಾರರು 20 ಲಕ್ಷ ರೂ. ಹಣ ಪಡೆದಿದ್ದರು. ಬುಕ್ಕಿಗಳ ಬಳಿ ಹಣ ಪಡೆದು ಇಬ್ಬರು ಆಟಗಾರರು ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಸಿಎಂ ಗೌತಮ್ ಅವರು ಕರ್ನಾಟಕದ ಪರವಾಗಿ ರಣಜಿ ಪಂದ್ಯಗಳಲ್ಲಿ, ಐಪಿಎಲ್‌ನಲ್ಲಿ ಮುಂಬೈ, ಆರ್‌ಸಿಬಿ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ಪರ ಆಟವಾಡಿದ್ದರು. ಇತ್ತ ಅಬ್ರರ್ ಖಾಜಿ ಕೂಡ ಕರ್ನಾಟಕ ತಂಡದ ರಣಜಿ ಆಟಗಾರರಾಗಿದ್ದಾರೆ. ಸದ್ಯ ಇಬ್ಬರು ಆಟಗಾರರನ್ನು ಬಂಧಿಸಿದ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆಗಸ್ಟ್ 31ರಂದು ಮೈಸೂರಿನಲ್ಲಿ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


