ಕ್ರಿಕೆಟ್

ರಾಂಚಿ ಟೆಸ್ಟ್ : ರೋಹಿತ್, ರಹಾನೆ ಉತ್ತಮ ಜೊತೆಯಾಟ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೇಲುಗೈ

ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 200 ರನ್ ಹರಿದುಬಂದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

ರಾಂಚಿ ಟೆಸ್ಟ್ : ರೋಹಿತ್, ರಹಾನೆ ಉತ್ತಮ ಜೊತೆಯಾಟ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೇಲುಗೈ
ರೋಹಿತ್ ಶರ್ಮಾ, ರಹಾನೆ
Published On :

ರಾಂಚಿ: ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 200 ರನ್ ಹರಿದುಬಂದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡ ನಂತರ ಆರಂಭಿಕ ಆಟಗಾರ ಮಾಯಾಂಕ್ ಅಗರ್ ವಾಲ್  10, ಚೇತೇಶ್ವರ್ ಪೂಜಾರ 0 ಹಾಗೂ ನಾಯಕ ವಿರಾಟ್ ಕೊಹ್ಲಿ ಕೇವಲ 12 ರನ್ ಗಳಿಗೆ ಔಟಾಗುವ ಮೂಲಕ ಆರಂಭಿಕ ಆಘಾತ ಅನುಭವಿಸಬೇಕಾಗಿತ್ತು. ಆದರೆ, ಇಂತಹ ಸಂಕಷ್ಟದ ಸಂದರ್ಭದಲ್ಲಿ ಜೊತೆಯಾದ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಉತ್ತಮ ಆಟ ಪ್ರದರ್ಶಿಸಿದರು. 

ಮಂದ ಬೆಳಕು ಹಾಗೂ ಮಳೆಯ ಕಾರಣ ಮೊದಲ ದಿನದ ಪಂದ್ಯವನ್ನು ಮೊಟಕುಗೊಳಿಸಲಾಗಿದ್ದು ಭಾರತ ಮೂರು ವಿಕೆಟ್ ಗಳಿಗೆ 224 ರನ್ ಗಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.