ಚೊಚ್ಚಲ 'ದ್ವಿಶತಕ' ಸಿಡಿಸಿದ ಹಿಟ್‍ಮನ್ ರೋಹಿತ್ ಶರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಅವರು ವೃತ್ತಿ ಜೀವನದ ಚೊಚ್ಚಲ ದ್ವಿಶತಕ ಸಿಡಿಸಿದರು.

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಅವರು ವೃತ್ತಿ ಜೀವನದ ಚೊಚ್ಚಲ ದ್ವಿಶತಕ ಸಿಡಿಸಿದರು.
ಇಲ್ಲಿನ ಜೆಎಸ್‍ಸಿಎ ಕ್ರೀಡಾಂಗಣದಲ್ಲಿ ಎರಡನೇ ದಿನವಾದ ಇಂದು 117 ರನ್ ಗಳಿಂದ ಬ್ಯಾಟಿಂಗ್ ಮುಂದುವರಿಸಿದ ಹಿಟ್‍ಮನ್ ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ಬೆಂಡೆತ್ತಿದರು.
255 ಎಸೆತಗಳನ್ನು ಎದುರಿಸಿದ ಅವರು ಆರು ಸಿಕ್ಸರ್ ಹಾಗೂ 28 ಬೌಂಡರಿಯೊಂದಿಗೆ 212 ರನ್ ಗಳಿಸಿ ಟೆಸ್ಟ್ ವೃತ್ತಿ ಜೀವನದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ನೆರೆದಿದ್ದ ಅಪಾರ ಅಭಿಮಾನಿಗಳ ಪ್ರೀತಿಗೆ ಭಾಜನರಾದರು.
ಮಧ್ಯಾಹ್ನ ಭೋಜನ ಮುಗಿಸಿಕೊಂಡು ಕ್ರೀಸ್‍ಗೆ ಬಂದ ರೋಹಿತ್ ಶರ್ಮಾ 86ನೇ ಓವರ್ ಮೆಡಿನ್ ಕೊಟ್ಟರು. ನಂತರ, ಲುಂಗಿ ಎನ್ ಗಿಡಿ ಓವರ್ ನ ಮೊದಲನೇ ಎಸೆತವನ್ನೂ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಸಿಡಿಸಿ ದ್ವಿಶತಕ ಸಂಭ್ರಮ ಆಚರಿಸಿದರು. ನಂತರ ಅವರು ಕಗಿಸೋ ರಬಾಡ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


