ಕ್ರಿಕೆಟ್

'ಅವರೆಷ್ಟು, ಅವರ ಯೋಗ್ಯತೆ ಎಷ್ಟು': ಬುಮ್ರಾ ಬೌಲಿಂಗ್ ಅನುಮಾನಿಸಿದ ಬಿಷಪ್ ವಿರುದ್ಧ ಗವಾಸ್ಕರ್ ಗರಂ

ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದು ಇದರ ಬೆನ್ನಲ್ಲೇ ಬುಮ್ರಾ ಬೌಲಿಂಗ್ ಶೈಲಿ ಬಗ್ಗೆ ವಿಂಡೀಸ್ ಮಾಜಿ ಆಟಗಾರ ಇಯಾನ್ ಬಿಷಪ್ ಅನುಮಾನ ವ್ಯಕ್ತಪಡಿಸಿದ್ದು ಇದಕ್ಕೆ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

'ಅವರೆಷ್ಟು, ಅವರ ಯೋಗ್ಯತೆ ಎಷ್ಟು': ಬುಮ್ರಾ ಬೌಲಿಂಗ್ ಅನುಮಾನಿಸಿದ ಬಿಷಪ್ ವಿರುದ್ಧ ಗವಾಸ್ಕರ್ ಗರಂ
ಇಯಾನ್-ಬುಮ್ರಾ-ಗವಾಸ್ಕರ್
Published On :

ಕಿಂಗ್ ಸ್ಟನ್: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದು ಇದರ ಬೆನ್ನಲ್ಲೇ ಬುಮ್ರಾ ಬೌಲಿಂಗ್ ಶೈಲಿ ಬಗ್ಗೆ ವಿಂಡೀಸ್ ಮಾಜಿ ಆಟಗಾರ ಇಯಾನ್ ಬಿಷಪ್ ಅನುಮಾನ ವ್ಯಕ್ತಪಡಿಸಿದ್ದು ಇದಕ್ಕೆ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಸುನೀಲ್ ಗವಾಸ್ಕರ್ ಮತ್ತು ಇಯಾನ್ ಬಿಷಪ್ ವೀಕ್ಷಕ ವಿವರಣೆಗಾರರಾಗಿ ಕೆಲಸ ಮಾಡುತ್ತಿದ್ದರು. ಬುಮ್ರಾ ಹ್ಯಾಟ್ರಿಕ್ ವಿಕೆಟ್ ಪಡೆಯುತ್ತಿದ್ದಂತೆ ಇಯಾನ್ ಬಿಷಪ್ ಬುಮ್ರಾ ಅವರ ಬೌಲಿಂಗ್ ಶೈಲಿಯ ಬಗ್ಗೆ ಕೆಲವರು ಸಂದೇಹ ವ್ಯಕ್ತಪಡಿಸಿ ಪ್ರಶ್ನೆ ಎತ್ತಿದ್ದಾರೆ ಎಂದು ಹೇಳಿದರು.

ಕೂಡಲೇ ಮಧ್ಯಪ್ರವೇಶಿಸಿದ ಗವಾಸ್ಕರ್ ಪ್ರಶ್ನೆ ಮಾಡಿದ ವ್ಯಕ್ತಿಗಳು ಯಾರು? ಅವರ ಹೆಸರು ಹೇಳಬಹುದೇ? ಎಂದು ಖಾರವಾಗಿ ಪ್ರಶ್ನಿಸಿದರು. ಈ ವೇಳೆ ಬಿಷಪ್ ಸುಮ್ಮನಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.