ಆಟಗಾರರನ್ನು ಚಾರ್ಟೆಡ್ ಫ್ಲೈಟ್ ನಲ್ಲಿ ಕರೆತನ್ನಿ, ಕೋವಿಡ್ ಪರೀಕ್ಷೆ ನಡೆಸಿ, ಆದರೆ ಟಿ20 ವಿಶ್ವಕಪ್ ರದ್ದು ಮಾಡಬೇಡಿ: ಬ್ರಾಡ್ ಹಾಗ್
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಕ್ರಿಕೆಟ್ ಸರಣಿಗಳು ಸ್ಥಗಿತಗೊಂಡಿವೆ. ಈ ನಡುವೆ ಮುಂದಿನ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮೇಲೆ ಕಾರ್ಮೋಡ ಆವರಿಸಿದ್ದು ಯಾವುದೇ ಕಾರಣಕ್ಕೂ ಸರಣಿಯನ್ನು ರದ್ದು ಮಾಡಬೇಡಿ ಎಂದು ಮಾಜಿ ಆಸ್ಟ್ರೇಲಿಯಾ ಕ್ರಿಕೆಟಿಗ ಬ್ರಾಡ್ ಹಾಗ್ ಹೇಳಿದ್ದಾರೆ.

ಮೆಲ್ಬೋರ್ನ್: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಕ್ರಿಕೆಟ್ ಸರಣಿಗಳು ಸ್ಥಗಿತಗೊಂಡಿವೆ. ಈ ನಡುವೆ ಮುಂದಿನ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮೇಲೆ ಕಾರ್ಮೋಡ ಆವರಿಸಿದ್ದು ಯಾವುದೇ ಕಾರಣಕ್ಕೂ ಸರಣಿಯನ್ನು ರದ್ದು ಮಾಡಬೇಡಿ ಎಂದು ಮಾಜಿ ಆಸ್ಟ್ರೇಲಿಯಾ ಕ್ರಿಕೆಟಿಗ ಬ್ರಾಡ್ ಹಾಗ್ ಹೇಳಿದ್ದಾರೆ.
ಟೂರ್ನಿಗೂ ಮೊದಲೇ ಆಟಗಾರರನ್ನು ಚಾರ್ಟೆಡ್ ಫ್ಲೈಟ್ ನಲ್ಲಿ ಕರೆತನ್ನಿ, ಅವರಿಗೆ ಕೊರೋನಾ ಪರೀಕ್ಷೆಗಳನ್ನು ನಡೆಸಿ ಆದರೆ ಟೂರ್ನಿಯನ್ನು ಮಾತ್ರ ರದ್ದು ಮಾಡಬೇಡಿ ಎಂದು ಬ್ರಾಡ್ ಹಾಗ್ ಮನವಿ ಮಾಡಿದ್ದಾರೆ.
ಮಹಾಮಾರಿ ಕೊರೋನಾ ವೈರಸ್ ನಿಂದಾಗಿದ ಜಗತ್ತಿನಾದ್ಯಂತ 1,26,000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಜಗತ್ತೆ ಒಂದು ರೀತಿಯಲ್ಲಿ ಲಾಕ್ ಡೌನ್ ಪರಿಸ್ಥಿತಿ ಎದುರಿಸುತ್ತಿದೆ.
ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ಆಸ್ಟ್ರೇಲಿಯಾದಲ್ಲಿ ಟಿ20 ಸರಣಿ ನಡೆಯಬೇಕಿತ್ತು. ಆದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಟೂರ್ನಿ ನಡೆಯುವುದು ಡೌಟ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


