ಕ್ರಿಕೆಟ್

ಧೋನಿ, ರೋಹಿತ್‍ ಐಪಿಎಲ್‍ನ ಸಾರ್ವಕಾಲಿಕ ಶ್ರೇಷ್ಠ ನಾಯಕರು

ಐಪಿಎಲ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ನಾಯಕರಾಗಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ.

ಧೋನಿ, ರೋಹಿತ್‍ ಐಪಿಎಲ್‍ನ ಸಾರ್ವಕಾಲಿಕ ಶ್ರೇಷ್ಠ ನಾಯಕರು
ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ
Published On :

ನವದೆಹಲಿ: ಐಪಿಎಲ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ನಾಯಕರಾಗಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ.

ಐಪಿಎಲ್‌ನ 13 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್‌ನಲ್ಲಿ ಈ ಘೋಷಣೆ ಮಾಡಲಾಗಿದೆ.ರೋಹಿತ್ ನಾಯಕತ್ವದಲ್ಲಿ ಮುಂಬೈ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದರೆ, ಧೋನಿ ನಾಯಕತ್ವದಲ್ಲಿ ಚೆನ್ನೈ ಮೂರು ಬಾರಿ ಗೆದ್ದಿದೆ. 

ಧೋನಿ ಮತ್ತು ರೋಹಿತ್ ಅವರಲ್ಲದೆ, ಬೆಂಗಳೂರು ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಅತ್ಯುತ್ತಮ ಬ್ಯಾಟ್ಸ್‌ಮನ್ ಮತ್ತು ಮುಂಬೈ ವೇಗದ ಬೌಲರ್ ಲಸಿತ್ ಮಾಲಿಂಗ ಅವರನ್ನು ಅತ್ಯುತ್ತಮ ಬೌಲರ್ ಎಂದು ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.