ಭಾರತದ 'ದಿ ವಾಲ್' ಖ್ಯಾತಿಯ ದ್ರಾವಿಡ್ ಮುಂದೆ ನಾನು 11 ವರ್ಷದ ಮಗುವಿನಂತಾಗಿದ್ದೆ: ಗ್ರೇಮ್ ಸ್ವಾನ್
ಭಾರತೀಯ ಕ್ರಿಕೆಟ್ ದಿಗ್ಗಜರ ಪೈಕಿ ಒಬ್ಬರಾಗಿರುವ ಮಿಸ್ಟರ್ ಡಿಪೆಂಡಬಲ್ ರಾಹುಲ್ ದ್ರಾವಿಡ್ ಬಗ್ಗೆ ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ.

ಲಂಡನ್: ಭಾರತೀಯ ಕ್ರಿಕೆಟ್ ದಿಗ್ಗಜರ ಪೈಕಿ ಒಬ್ಬರಾಗಿರುವ ಮಿಸ್ಟರ್ ಡಿಪೆಂಡಬಲ್ ರಾಹುಲ್ ದ್ರಾವಿಡ್ ಬಗ್ಗೆ ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ.
ತಮ್ಮ ಕ್ರೀಡಾ ಜೀವನದಲ್ಲಿ ದ್ರಾವಿಡ್ ಅವರನ್ನು ಮೀರಿದ ಅತ್ಯುತ್ತಮ ಕ್ರೀಡಾಪಟುವನ್ನು ತಾವು ನೋಡಿಲ್ಲ ಎಂದು ಸಂದರ್ಶನವೊಂದರಲ್ಲಿ ಎಂದು ಹೇಳಿದ್ದಾರೆ.
ರಾಹುಲ್ ದ್ರಾವಿಡ್ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್. ನಾನು ಅವರಿಗೆ ಕೌಂಟಿ ಪಂದ್ಯಗಳಲ್ಲಿ ಬೌಲ್ ಮಾಡಿದ್ದೇನೆ. ಅವರು ಬ್ಯಾಟಿಂಗ್ ಮಾಡುತ್ತಿದ್ದರೆ, ನಾನು 11 ವರ್ಷದ ಸ್ಪಿನ್ನರ್ ಎಂದು ಭಾಸವಾಗುತ್ತಿತ್ತು ಎಂದು ಸ್ವಾನ್ ಹೇಳಿದ್ದಾರೆ.
ಗ್ರೇಮ್ ಸ್ವಾನ್ ಇಂಗ್ಲೆಡ್ ಪರ 60 ಟೆಸ್ಟ್ ಪಂದ್ಯವಾಡಿದ್ದು 255 ವಿಕೆಟ್ ಗಳನ್ನು ಪಡೆದಿದ್ದಾರೆ. 79 ಏಕದಿನ ಪಂದ್ಯಗಳಲ್ಲಿ 104 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


