ಕ್ರಿಕೆಟ್

ಮಹಿಳಾ ಐಪಿಎಲ್: ಗಂಗೂಲಿ ನಿರ್ಧಾರಕ್ಕೆ ಮಿಥಾಲಿರಾಜ್ ಸೇರಿದಂತೆ ಹಲವು ಆಟಗಾರ್ತಿಯರು ಸ್ವಾಗತ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಿಳಾ ಐಪಿಎಲ್: ಗಂಗೂಲಿ ನಿರ್ಧಾರಕ್ಕೆ ಮಿಥಾಲಿರಾಜ್ ಸೇರಿದಂತೆ ಹಲವು ಆಟಗಾರ್ತಿಯರು ಸ್ವಾಗತ
ಸಂಗ್ರಹ ಚಿತ್ರ
Published On :

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಅತ್ತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಕುರಿತಂತೆ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಟ್ವೀಟ್ ಮಾಡಿರುವ ಮಹಿಳಾ ಕ್ರಿಕೆಟ್ ಆಟಗಾರ್ತಿಯರು, ಸೌರವ್ ಗಂಗೂಲಿ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ನಿಜಕ್ಕೂ ಇದು ಉತ್ತಮ ಸುದ್ದಿ. ನಮ್ಮ ಏಕದಿನ ವಿಶ್ವಕಪ್ ತರಬೇತಿ ಅಭಿಯಾನ ಆರಂಭವಾಗುತ್ತಿದೆ. ಅಂತೆಯೇ ಮಹಿಳಾ ಕ್ರಿಕೆಟ್ ಗೆ ನೆರವು ನೀಡುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

ಅಂತೆಯೇ ಪೂನಂ ಯಾದವ್ ಕೂಡ ಟ್ವೀಟ್ ಮಾಡಿದ್ದು, ಒಳ್ಳೆಯ ಸುದ್ದಿ, ಧನ್ಯವಾದಗಳು ಬಿಸಿಸಿಐ, ಸೌರವ್ ಗಂಗೂಲಿ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.