"ಒಂದು ಯುಗದ ಅಂತ್ಯ" ಧೋನಿ ನಿವೃತ್ತಿ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯೆ
ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ,ಯುಗದ ಅಂತ್ಯ ಎಂದು ಕರೆದಿದ್ದಾರೆ.ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ ಶನಿವಾರ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ
ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ,ಯುಗದ ಅಂತ್ಯ
ಎಂದು ಕರೆದಿದ್ದಾರೆ. ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ ಶನಿವಾರ ಹೇಳಿಕೆ ನೀಡಿದ್ದಾರೆ.
ಧೋನಿ ದೇಶ ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ವಿಶಿಷ್ಟ ಆಟಗಾರರಾಗಿದ್ದಾರೆ. ವಿಶೇಷವಾಗಿ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಅವರ ಸಾಧನೆ ಅಪಾರ.ಆರಂಭದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ವಿಶ್ವದ ಗಮನ ಸೆಳೆದಿದ್ದು,ವಿಶ್ವದಾದ್ಯಂತ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ ಎಂದಿದ್ದಾರೆ.
ಪ್ರತಿಯೊಂದು ಒಳ್ಳೆಯ ವಿಷಯಕ್ಕೂ ಅದರ ಅಂತ್ಯವಿದೆ ಮತ್ತು ಅದು ಸಂಪೂರ್ಣವಾಗಿ ಅದ್ಭುತವಾಗಿದೆ.ದೇಶದ ವಿಕೆಟ್ ಕೀಪರ್‌ಗಳಿಗೆ ಮಾನದಂಡವನ್ನು ನಿಗದಿಪಡಿಸಿದ್ದಾರೆ.ಯಾವುದೇ ವಿಷಾದವಿಲ್ಲದೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ.ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಬಯಸುತ್ತೇನೆ" ಎಂದು ಗಂಗೂಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


