ಧೋನಿಗೆ ಬೀಳ್ಕೊಡುಗೆ ಪಂದ್ಯ ಆಯೋಜಿಸಲು ಬಿಸಿಸಿಐ ಉತ್ಸುಕ
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ನಿವೃತ್ತಿ ಘೋಷಿಸಿದ್ದ ಎಂಎಸ್ ಧೋನಿಗೆ ಬೀಳ್ಕೊಡುಗೆ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.

ನವದೆಹಲಿ: ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ನಿವೃತ್ತಿ ಘೋಷಿಸಿದ್ದ ಎಂಎಸ್ ಧೋನಿಗೆ ಬೀಳ್ಕೊಡುಗೆ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.
ಐಎಎನ್ಎಸ್ ಜೊತೆ ಮಾತನಾಡಿರುವ ಬಿಸಿಸಿಐ ಅಧಿಕಾರಿ "ಬಿಸಿಸಿಐ ಧೋನಿ ಜೊತೆ ಮಾತನಾಡಲಿದ್ದು, ಅದರ ನಂತರ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಈಗ ಯಾವುದೇ ಅಂತಾರಾಷ್ಟ್ರೀಯ ಸರಣಿಗಳು ಇಲ್ಲ. ಐಪಿಎಲ್ ನಂತರ ಏನು ಮಾಡಬೇಕೆಂಬ ಬಗ್ಗೆ ತೀರ್ಮಾನಿಸುತ್ತೇವೆ, ಏಕೆಂದರೆ ದೇಶಕ್ಕಾಗಿ ಧೋನಿ ಸಾಕಷ್ಟು ಮಾಡಿದ್ದಾರೆ, ಅವರು ಎಲ್ಲಾ ಗೌರವಗಳಿಗೂ ಅರ್ಹರು, ಧೋನಿಗೆ ಬೀಳ್ಕೊಡುಗೆ ಪಂದ್ಯವನ್ನು ಆಯೋಜಿಸಬೇಕೆಂಬುದು ನಮ್ಮ ಅಭಿಪ್ರಾಯವಾಗಿತ್ತು. ಆದರೆ ಧೋನಿ ಭಿನ್ನ ಆಟಗಾರ ಅದರ ಬಗ್ಗೆ ಯಾರೂ ಯೋಚನೆಯನ್ನೂ ಮಾಡದ ಸಂದರ್ಭದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.
ಐಪಿಎಲ್ ವೇಳೆ ಧೋನಿ ಜೊತೆ ಬೀಳ್ಕೊಡುಗೆ ಪಂದ್ಯದ ಬಗ್ಗೆ ಮಾತನಾಡಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


