ಫೆಬ್ರವರಿ 2021 ರಲ್ಲಿ ಇಂಗ್ಲೆಂಡ್‌ಗೆ ಆತಿಥ್ಯ ವಹಿಸಲು ಬದ್ಧ: ಗಂಗೂಲಿ
ಮುಂದಿನ ಪ್ರವಾಸ ಕಾರ್ಯಕ್ರಮವನ್ನು ಪೂರ್ಣಗೊಳಿಸಲು ಮಂಡಳಿ ಬದ್ಧ ಮತ್ತು ಮುಂದಿನ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಆತಿಥ್ಯ ವಹಿಸಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಸೌರಭ್ ಗಂಗೂಲಿ ರಾಜ್ಯ ಸಂಘಗಳಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ಮುಂದಿನ ಪ್ರವಾಸ ಕಾರ್ಯಕ್ರಮವನ್ನು ಪೂರ್ಣಗೊಳಿಸಲು ಮಂಡಳಿ ಬದ್ಧ ಮತ್ತು ಮುಂದಿನ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಆತಿಥ್ಯ ವಹಿಸಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಸೌರಭ್ ಗಂಗೂಲಿ ರಾಜ್ಯ ಸಂಘಗಳಿಗೆ ಪತ್ರ ಬರೆದಿದ್ದಾರೆ.
ಈ ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಸೇರಿದಂತೆ, ಮುಂದಿನ ಪ್ರವಾಸ ವೇಳಾಪಟ್ಟಿಗೆ ಮಂಡಳಿ ಬದ್ಧವಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.
"ಹಿರಿಯ ಪುರುಷರ ತಂಡ ಈ ವರ್ಷದ ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ತೆರಳಲಿದೆ ಮತ್ತು ಅಲ್ಲಿಂದ ಹಿಂತಿರುಗಿ ಮುಂದಿನ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ತವರು ಸರಣಿಯನ್ನು ಆಡಲಿದೆ. ಮಹಿಳಾ ತಂಡದ ಪ್ರವಾಸಕ್ಕಾಗಿ ಚರ್ಚೆಗಳು ನಡೆಯುತ್ತಿವೆ ಮತ್ತು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು” ಎಂದಿದ್ದಾರೆ.
ಭಾರತವು ಮುಂದಿನ ವರ್ಷ ಟಿ -20 ವಿಶ್ವಕಪ್ ಮತ್ತು 2023 ರಲ್ಲಿ ಏಕದಿನ ವಿಶ್ವಕಪ್ ಅನ್ನು ಆಯೋಜಿಸಬೇಕಾಗಿದೆ, ಇದು ಈಗಾಗಲೇ ದೃಢಪಟ್ಟಿದೆ. ಭವಿಷ್ಯದ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಭಾರತವು ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದು, ಫೆಬ್ರವರಿ 2021 ರಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಇಂಗ್ಲೆಂಡ್‌ಗೆ ಆತಿಥ್ಯ ವಹಿಸಲಿದೆ.
ಪ್ರವಾಸವನ್ನು ವೇಳಾಪಟ್ಟಿಯಂತೆ ಮಾಡಲಾಗುವುದು ಎಂದು ಗಂಗೂಲಿ ಹೇಳಿದರು. ಆದರೆ, ಮಾರ್ಚ್‌ನಲ್ಲಿ ಅಫ್ಘಾನಿಸ್ತಾನದೊಂದಿಗಿನ ಮೂರು ಏಕದಿನ ಸರಣಿಯ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಈ ಸರಣಿಯು ಭವಿಷ್ಯದ ಪ್ರವಾಸ ಕಾರ್ಯಕ್ರಮದ ಭಾಗವಾಗಿದೆ” ಎಂದು ಗಂಗೂಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


