ಕ್ರಿಕೆಟ್

ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ 

ಎಲ್ಲಾ ಅಡೆತಡೆಗಳ ನಡುವೆ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಅಂಗಣದಲ್ಲಿ ಆಯೋಜನೆಯಾಗಲು ಸಜ್ಜಾಗಿದ್ದು, ಸೆಪ್ಟೆಂಬರ್‌ 19ರಿಂದ ನವೆಂಬರ್‌ 10ರವರೆಗೆ ಬಯೋ ಸೆಕ್ಯೂರ್‌ ವಾತಾವರಣ ಇರುವ ದುಬೈ, ಶರ್ಜಾ ಮತ್ತು ಅಬುದಾಭಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ 
ಚೆನ್ನೈ ಸೂಪರ್ ಕಿಂಗ್ಸ್ ತಂಡ
Published On :

ನವದೆಹಲಿ: ಎಲ್ಲಾ ಅಡೆತಡೆಗಳ ನಡುವೆ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಅಂಗಣದಲ್ಲಿ ಆಯೋಜನೆಯಾಗಲು ಸಜ್ಜಾಗಿದ್ದು,  ಸೆಪ್ಟೆಂಬರ್‌ 19ರಿಂದ ನವೆಂಬರ್‌ 10ರವರೆಗೆ ಬಯೋ ಸೆಕ್ಯೂರ್‌ ವಾತಾವರಣ ಇರುವ ದುಬೈ, ಶರ್ಜಾ ಮತ್ತು ಅಬುದಾಭಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಟೂರ್ನಿ ಸಲುವಾಗಿ ಈಗಾಗಗಲೇ ಎಲ್ಲಾ 8 ತಂಡಗಳು ದುಬೈನಲ್ಲಿ ಬೀಡು ಬಿಟ್ಟಿದ್ದು, 3 ವಾರಗಳ ಅಭ್ಯಾಸ ಶಿಭಿರ ಆರಂಭಿಸಿವೆ. ಆದರೆ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರರಲ್ಲಿ ಕೋವಿಡ್‌-19 ಸೋಂಕು ಕಾಣಿಸಿಕೊಂಡಿರುವುದು ಇದೀಗ ಕಳವಳಕ್ಕೆ ಕಾರಣವಾಗಿದೆ.

ಕೋವಿಡ್‌-19 ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಿಎಸ್‌ಕೆ ಆಟಗಾರರು ಅಭ್ಯಾಸ ಬಿಟ್ಟು ಮತ್ತೆ 6 ದಿನಗಳ ಕ್ವಾರಂಟೈನ್‌ಗೆ ಒಳಪಡಬೇಕಿದೆ.ಹೀಗಾಗಿ ಸೆಪ್ಟೆಂಬರ್‌ 19ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್‌ ವಿರುದ್ದದ ಐಪಿಎಲ್‌ 2020 ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಸಿಎಸ್‌ಕೆ ಅಲಭ್ಯವಾಗುವ ಸಾಧ್ಯತೆ ಇದೆ.

ನಿಗದಿಯಂತೆ ಮಾರ್ಚ್‌ 29ರಿಂದ ಮೇ 29ರವರೆಗೆ ಟೂರ್ನಿ ನಡೆದಿದ್ದರೆ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಮತ್ತು ಚೆನ್ನೈ ತಂಡಗಳು ಮುಖಾಮುಖಿಯಾಗಬೇಕಿತ್ತು. ಅಂತೆಯೇ ಹೊಸ ವೇಳಾಪಟ್ಟಿಯಲ್ಲೂ  ಇದೇ ತಂಡಗಳು ಮೊದಲ ಪಂದ್ಯವನ್ನಾಡಲಿವೆ ಎಂಬುದು ಅಭಿಮಾನಿಗಳು ನಿರೀಕ್ಷೆಯಾಗಿತ್ತು.ಆದರೆ,ಐಪಿಎಲ್‌ 2020 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ ಸ್ಪರ್ಧಿಸುವ ಸ್ಥಿತಿಯಲ್ಲಿಲ್ಲ ಎಂದು ಬಿಸಿಸಿಐನ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.