ಕ್ರಿಕೆಟ್

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡ ಕೊರೋನಾ ಬಗ್ಗೆ ಹ್ಯಾಜಲ್ ವುಡ್ ಚಿಂತೆ

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ನಡೆದ ಕೊರೊನಾ ವ್ಯವಹಾರಗಳ ಬಗ್ಗೆ ತೀವ್ರ ಕಾಳಜಿ ಇದೆ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾ ಜಲ್‌ವುಡ್ ಒಪ್ಪಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡ ಕೊರೋನಾ ಬಗ್ಗೆ ಹ್ಯಾಜಲ್ ವುಡ್ ಚಿಂತೆ
ಸಿಎಸ್ ಕೆ ತಂಡ
Published On :

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ನಡೆದ ಕೊರೊನಾ ವ್ಯವಹಾರಗಳ ಬಗ್ಗೆ ತೀವ್ರ ಕಾಳಜಿ ಇದೆ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಒಪ್ಪಿಕೊಂಡಿದ್ದಾರೆ.

ಚೆನ್ನೈ ತಂಡದ ಇಬ್ಬರು ಆಟಗಾರರು ಸೇರಿದಂತೆ 13 ಸದಸ್ಯರು ಕೊರೊನಾದಿಂದ ಸೋಂಕಿಗೆ ಒಳಗಾಗಿದ್ದು, ಅವರನ್ನು ಪ್ರತ್ಯೇಕವಾಗಿರಿಸಲಾಗಿದೆ. ಚೆನ್ನೈ ಅಭ್ಯಾಸ ಶಿಬಿರವನ್ನು ಸೆಪ್ಟೆಂಬರ್ 1ರವರೆಗೆ ಮುಂದೂಡಲಾಗಿದೆ.

ವಾಟ್ಸಾಪ್ ಗ್ರೂಪ್ ಮೂಲಕ ತಂಡದಲ್ಲಿ ಏನು ನಡೆಯುತ್ತಿದೆ ಎಂಬ ಮಾಹಿತಿ ಸಿಗುತ್ತಿದ್ದು ಇದು ಸ್ವಲ್ಪ ಕಳವಳಕಾರಿಯಾಗಿದೆ ಎಂದು ಹ್ಯಾಜಲ್ ವುಡ್ ಸುದ್ದಿಗಾರರಿಗೆ ತಿಳಿಸಿದರು.

ಕೊರೋನಾ ಪಾಸಿಟಿವ್ ಬಂದಿರುವವರನ್ನು ಪ್ರತ್ಯೇಕ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದರು. 

ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿಯು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ, ಅಬು ಧಾಬಿ ಮತ್ತು ಶಾರ್ಜಾ ಕ್ರೀಡಾಂಗಣಗಳ ಜೈವಿಕಾ ಸುರಕ್ಷಿತ ವಾತಾವರಣದಲ್ಲಿ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.