ಕ್ರಿಕೆಟ್

ಐಸಿಸಿ ರ‍್ಯಾಂಕಿಂಗ್: ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಗಳಿಸಿದ ಡೇವಿಡ್ ಮಲನ್

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಡೇವಿಡ್ ಮಲನ್ ಅವರು ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಅಂಕ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಐಸಿಸಿ ರ‍್ಯಾಂಕಿಂಗ್: ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಗಳಿಸಿದ ಡೇವಿಡ್ ಮಲನ್
Published On :

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಡೇವಿಡ್ ಮಲನ್ ಅವರು ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಅಂಕ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಇತ್ತೀಚಿಗಷ್ಟೇ ಮುಕ್ತಾಯವಾದ ದಕ್ಷಿಣ ಆಪ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಇಂಗ್ಲೆಂಡ್‌ ತಂಡದ ಬ್ಯಾಟ್ಸ್‌ಮನ್‌ ಡೇವಿಡ್ ಮಲನ್ ಅವರು 915 ಅಂಕ ಗಳಿಸುವ ಮೂಲ ಟಿ-20 ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

33 ವರ್ಷದ ಎಡಗೈ ಬ್ಯಾಟ್ಸ್ ಮನ್ ಡೇವಿಡ್ ಅವರು 2018ರ ಜುಲೈನಲ್ಲಿ ಆಸ್ಟ್ರೇಲಿಯಾದ ಆರನ್ ಫಿಂಚ್ ಅವರ 900 ಅಂಕಗಳ ಸಾಧನೆಯ ನಂತರ 900 ಅಂಕಗಳನ್ನು ದಾಟಿದ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.

2017ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪದಾರ್ಪಣೆ ಪಂದ್ಯದಲ್ಲಿಯೇ ಮಲನ್‌, 44 ಎಸೆತಗಳಲ್ಲಿ 78 ರನ್‌ಗಳನ್ನು ಗಳಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಅವರು ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ತೋರುತ್ತಿದ್ದಾರೆ.

ಟಿ-20 ಮಾದರಿಯಲ್ಲಿ ಇಷ್ಟು ದಿನಗಳ ಕಾಲ ಅಗ್ರ ಸ್ಥಾನದಲ್ಲಿದ್ದ ಪಾಕಿಸ್ತಾನದ ಬಾಬರ್‌ ಆಝಮ್‌ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದು, 44 ಅಂಕಗಳ ಹಿನ್ನಡೆ ಅನುಭವಿಸಿದ್ದಾರೆ.

ಇನ್ನು ಭಾರತದ ಕೆಎಲ್ ರಾಹುಲ್ ಅವರು ನಾಲ್ಕನೇ ಸ್ಥಾನದಲ್ಲಿದ್ದರೆ ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಒಂಬತ್ತನೆ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.