ಮೂರನೇ ಏಕದಿನ: ಪಾಂಡ್ಯ, ಜಡೇಜಾ ಅಬ್ಬರದ ಬ್ಯಾಟಿಂಗ್; ಅಸೀಸ್ ಪಡೆಗೆ ಗೆಲ್ಲಲು 303 ರನ್ ಗುರಿ
ಬುಧವಾರ ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.

ಕ್ಯಾನ್ಬೆರಾ: ಬುಧವಾರ ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (92*), ರವೀಂದ್ರ ಜಡೇಜಾ (66*), ಕ್ಯಾಪ್ಟನ್ ವಿರಾಟ್ ಕೊಹ್ಲಿ (63) ರನ್ ಸಿಡಿಸಿ ಭಾರತ ಉತ್ತಮ ಮೊತ್ತ ಕಲೆಹಾಕಲು ನೆರವಾದರು.
ಆದರೆ ಆರಂಭಿಕರಾದ ಶಿಖರ್ ಧವನ್ ಕೇವಲ 16 ರನ್ ಗಳಿಸಿ ನಿರಾಶೆ ಮೂಡಿಸಿದ್ದರೆ ಎಸ್. ಗಿಲ್ 33, ಶ್ರೇಯಸ್ ಅಯ್ಯರ್ 19 ರನ್ ಗಳಿಸಿದ್ದರು. ಇನ್ನು ಕನ್ನಡಿಗ ಕೆ.ಎಲ್. ರಾಹುಲ್ ಸಹ ಕೇವಲ 5 ರನ್ ಕಲೆಹಾಕಿ ಪೆವಿಲಿಯನ್ ಹಾದಿ ಹಿಡಿದರು.
ಆಸ್ಟ್ರೇಲಿಯಾ ಪರ ಆಸ್ಟನ್ ಅಗರ್ 2, ಜೋಶ್ ಹ್ಯಾಝೆಲ್‌ವುಡ್, ಸೀನ್ ಅಬೊಟ್ಟ್, ಮತ್ತು ಆಡಮ್ ಜಂಪಾ ತಲಾ ಒಂದು ವಿಕೆಟ್ ಪಡೆದಿದ್ದರು.
ಕಳೆದ ಎರಡು ಪಂದ್ಯಗಳಲ್ಲಿ ಭಾರತ, ಸೋಲು ಕಂಡಿದೆ. ಹಾಗಾಗಿ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಇದೀಗ ಭಾರತಕ್ಕೆ ಈ ಗೆಲುವು ಗೌರವದ ಪ್ರಶ್ನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


