ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ: 12000 ಏಕದಿನ ರನ್ ಗಳಿಸಿದ ವೇಗದ ಬ್ಯಾಟ್ಸ್‌ಮನ್!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅತ್ಯಂತ ವೇಗವಾಗಿ 12,000 ಏಕದಿನ ರನ್ ಗಳಿಸಿದ ಜಗತ್ತಿನ ಮೊದಲ ಕ್ರಿಕೆಟಿಗ ಎನ್ನುವ ವಿಶ್ವದಾಖಲೆಗೆ ಪಾತ್ರವಾಗಿದ್ದಾರೆ.

ಕ್ಯಾನ್ಬೆರಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅತ್ಯಂತ ವೇಗವಾಗಿ 12,000 ಏಕದಿನ ರನ್ ಗಳಿಸಿದ ಜಗತ್ತಿನ ಮೊದಲ ಕ್ರಿಕೆಟಿಗ ಎನ್ನುವ ವಿಶ್ವದಾಖಲೆಗೆ ಪಾತ್ರವಾಗಿದ್ದಾರೆ.
ಈ ವಿಶೇಷ ದಾಖಲೆಗಾಗಿ ಕೊಹ್ಲಿಗೆ 23 ರನ್‌ಗಳ ಅಗತ್ಯವಿತ್ತು, ಇಂದಿನ ಪಂದ್ಯದಲ್ಲಿ ಕೊಹ್ಲಿ, ತಮ್ಮ 242 ನೇ ಇನ್ನಿಂಗ್ಸ್‌ನಲ್ಲಿ ಭಾರತದ ಇನ್ನಿಂಗ್ಸ್‌ನ 13 ನೇ ಓವರ್‌ನಲ್ಲಿ ಸೀನ್ ಅಬೊಟ್ಟ್ ಅವರ ಬೌಲಿಂಗ್ ವೇಳೆ ಈ ಮೈಲಿಗಲ್ಲು ತಲುಪಿದರು.
ಈ ಹಿಂದೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಈ ಸಾಧನೆಯನ್ನು ಮಾಡಲು 300 ಪಂದ್ಯಗಳಷ್ಟು ಕಾಲಾವಕಾಶ ತೆಗೆದುಕೊಂಡಿದ್ದರು.
ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ತನ್ನ ವೃತ್ತಿ ಜೀವನದ 251 ನೇ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾನೆದ್ದಾರೆ. ಅವರು ಇದುವರೆಗೆ 43 ಶತಕ ಹಾಗೂ 59 ಅರ್ಧಶತಕಗಳಿಂದಿಗೆ 60 ರನ್ ಗಳ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ.ಕೊಹ್ಲಿ 2008 ರಲ್ಲಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದರು.
ಸಚಿನ್ 1989 ಮತ್ತು 2012 ರ ನಡುವೆ 463 ಏಕದಿನ ಪಂದ್ಯಗಳಿಂದ 49 ಶತಕ ಮತ್ತು 96 ಅರ್ಧಶತಕಗಳ ಸಹಾಯದಿಂದ 44.83 ಸರಾಸರಿಯಲ್ಲಿ 18426 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


