ಕೌಟುಂಬಿಕ ಕಾರಣ: ಟಿ20 ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್
ಮೊದಲ ಟಿ20 ಪಂದ್ಯ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು ಖ್ಯಾತ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯಿಂದ ಹೊರಬಿದ್ದಿದ್ದಾರೆ.

ಸಿಡ್ನಿ: ಮೊದಲ ಟಿ20 ಪಂದ್ಯ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು ಖ್ಯಾತ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯಿಂದ ಹೊರಬಿದ್ದಿದ್ದಾರೆ.
ಕೌಟುಂಬಿಕ ಕಾರಣಗಳಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸಹಾನುಭೂತಿಯ ಆಧಾರದಲ್ಲಿ ಮಿಚೆಲ್ ಸ್ಟಾರ್ಕ್ ತಂಡವನ್ನು ತೊರೆಯಲು ಅವಕಾಶ ನೀಡಿದೆ. ಸ್ಟಾರ್ಕ್ ಕುಟುಂಬದ ಸದಸ್ಯರೊಬ್ಬರು ಅನಾರೋಗ್ಯಕ್ಕೀಡಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಕುಟಂಬವನ್ನು ಸೇರಿಕೊಳ್ಳಲು ಅವಕಾಶ ಕಲ್ಪಿಸಿದೆ. ಇನ್ನು ಸ್ಟಾರ್ಕ್ ತಂಡದಿಂದ ಹೊರಗುಳಿಯುವ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ.
ಕುಟುಂಬಕ್ಕಿಂತ ಈ ಜಗತ್ತಿನಲ್ಲಿ ಯಾವುದು ದೊಡ್ಡದಲ್ಲ. ಇದರಲ್ಲಿ ಸ್ಟಾರ್ಕ್ ಕೂಡ ಹೊರತಾಗಿಲ್ಲ. ನಾವು ಸ್ಟಾರ್ಕ್ ಗೆ ಬೇಕಾದ ಸಂಪೂರ್ಣ ಸಮಯವನ್ನು ನೀಡುತ್ತಿದ್ದೇವೆ. ಕುಟುಂಬಕ್ಕೆ ಅನುಕೂಲವಾಗುವ ರೀತಿಯಲ್ಲಿ ಅವರಿಗೆ ಯಾವಾಗ ಬೇಕೋ ಆಗ ತಂಡವನ್ನು ಸೇರಿಕೊಳ್ಳಲು ಸಮಯ ನೀಡಲಾಗಿದೆ ಎಂದು ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ.
ಮಿಚೆಲ್ ಸ್ಟಾರ್ಕ್ ಬದಲಿಗೆ ಆಸ್ಟ್ರೇಲಿಯಾ ತಂಡವನ್ನು ಅನುಭವಿ ಸ್ಪಿನ್ನರ್ ನಥನ್ ಲಿಯಾನ್ ಸೇರಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


