3ನೇ ಟಿ20 ಪಂದ್ಯ: ಭಾರತಕ್ಕೆ 187 ರನ್ ಗಳ ಗುರಿ ನೀಡಿದ ಆಸ್ಟ್ರೇಲಿಯಾ
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ 187 ರನ್ ಗಳ ಗುರಿ ನೀಡಿದೆ.

ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ 187 ರನ್ ಗಳ ಗುರಿ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ಮ್ಯಾಥ್ಯೂ ವೇಡ್ (80 ರನ್) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (54 ರನ್) ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ನಾಯಕ ಫಿಂಚ್ ಶೂನ್ಯಕ್ಕೆ ಔಟಾದರೂ, ಮತ್ತೊಂದು ತುದಿಯಲ್ಲಿದ್ದ ಮ್ಯಾಥ್ಯೂ ವೇಡ್ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೇವಲ 53 ಎಸೆತಗಳನ್ನು ಎದುರಿಸಿದ ಅವರು, 7 ಬೌಂಡರಿ ಮತ್ತು 2 ಸಿಕ್ಸರ್ ಗಳ ನೆರವಿನಿಂದ 80 ರನ್ ಸಿಡಿಸಿದರು.
ಸ್ಟ್ವೀವೆನ್ ಸ್ಮಿತ್ 24 ರನ್ ಗಳಿಸಿ ಔಟಾದರೆ ಬಳಿಕ ಕ್ರೀಸ್ ಗೆ ಆಗಮಿಸಿದ ಮಧ್ಯಮ ಕ್ರಮಾಂಕ ಆಟಗಾರ ಗ್ಲೇನ್ ಮ್ಯಾಕ್ಸ್ ವೆಲ್ ಸ್ಫೋಟಕ ಪ್ರದರ್ಶನ ನೀಡಿದರು, ಕೇವಲ 36 ಎಸೆತಗಳನ್ನು ಎದುರಿಸಿದ ಅವರು 54 ರನ್ ಗಳನ್ನು ಸಿಡಿಸಿ ಆಸ್ಟ್ರೇಲಿಯಾ ಮೊತ್ತ 160 ಗಡಿ ದಾಟಲು ನೆರವಾದರು. ಅಂತಿಮವಾಗಿ ಫಿಂಚ್ ಪಡೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.
ಭಾರತದ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರೆ, ನಟರಾಜನ್ ಮತ್ತು ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


