ಕ್ರಿಕೆಟ್

ಚೊಚ್ಚಲ ಟಿ20 ಸರಣಿಯಲ್ಲೇ ಅದ್ಭುತ ಪ್ರದರ್ಶನ ನೀಡಿದ ನಟರಾಜನ್ ಗೆ ಅವಿಸ್ಮರಣೀಯ ಉಡುಗೊರೆ ನೀಡಿದ ಪಾಂಡ್ಯಾ!

ಸಿಡ್ನಿಯಲ್ಲಿ ಮುಕ್ತಾಯವಾದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿದ್ದು, ಇದೇ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ ಚೊಚ್ಚಲ ಸರಣಿಯಲ್ಲೇ ಅದ್ಭುತ ಪ್ರದರ್ಶನ ನೀಡಿರುವ ಭಾರತದ ನಟರಾಜನ್ ಗೆ ಹಾರ್ದಿಕ್ ಪಾಂಡ್ಯಾ ಅವಿಸ್ಮರಣೀಯ ಉಡುಗೊರೆ ನೀಡಿದ್ದಾರೆ.

ಚೊಚ್ಚಲ ಟಿ20 ಸರಣಿಯಲ್ಲೇ ಅದ್ಭುತ ಪ್ರದರ್ಶನ ನೀಡಿದ ನಟರಾಜನ್ ಗೆ ಅವಿಸ್ಮರಣೀಯ ಉಡುಗೊರೆ ನೀಡಿದ ಪಾಂಡ್ಯಾ!
ಪ್ರಶಸ್ತಿ ಹಂಚಿಕೊಂಡ ಹಾರ್ದಿಕ್ ಪಾಂಡ್ಯಾ
Published On :

ಸಿಡ್ನಿ: ಸಿಡ್ನಿಯಲ್ಲಿ ಮುಕ್ತಾಯವಾದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿದ್ದು, ಇದೇ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ ಚೊಚ್ಚಲ ಸರಣಿಯಲ್ಲೇ ಅದ್ಭುತ ಪ್ರದರ್ಶನ ನೀಡಿರುವ ಭಾರತದ ನಟರಾಜನ್ ಗೆ ಹಾರ್ದಿಕ್ ಪಾಂಡ್ಯಾ ಅವಿಸ್ಮರಣೀಯ  ಉಡುಗೊರೆ ನೀಡಿದ್ದಾರೆ.

ಸಿಡ್ನಿಯಲ್ಲಿ ನಿನ್ನೆ ನಡೆದ ಅಂತಿಮ ಟಿ20ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದು, ಆದರೆ ಕೊಹ್ಲಿ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಸರಣಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಆದರೆ ತನಗೆ  ಲಭಿಸಿದ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಹಾರ್ದಿಕ್ ಪಾಂಡ್ಯ ಅವರು ಯುವ ವೇಗದ ಬೌಲರ್ ಟಿ.ನಟರಾಜನ್‌ಗೆ ಹಂಚುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ತಮ್ಮ ಚೊಚ್ಚಲ ಸರಣಿಯಲ್ಲೇ ಪ್ರಭಾವಿ ಬೌಲಿಂಗ್ ಸಂಘಟಿಸಿರುವ ನಟರಾಜನ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಈ ಬಗ್ಗೆ ಹಾರ್ದಿಕ್ ಪಾಂಡ್ಯ ಟ್ವೀಟ್ ಕೂಡಾ ಮಾಡಿದ್ದು, 'ನಟರಾಜನ್, ಈ ಸರಣಿಯಲ್ಲಿ ನೀವು ಅದ್ಭುತ. ಭಾರತಕ್ಕಾಗಿ ಪದಾರ್ಪಣೆ ಮಾಡಿದ ಸರಣಿಯಲ್ಲಿ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಅದ್ಭುತ  ಪ್ರದರ್ಶನ ನೀಡಿರುವುದು ನಿಮ್ಮ ಪ್ರತಿಭೆ ಹಾಗೂ ಕಠಿಣ ಪರಿಶ್ರಮವನ್ನು ತೋರಿಸುತ್ತದೆ. ನನ್ನ ಕಡೆಯಿಂದ ನೀವು ಸರಣಿಶ್ರೇಷ್ಠ ಪ್ರಶಸ್ತಿಗೆ ಅರ್ಹವಾಗಿದ್ದೀರಿ ಸಹೋದರ' ಎಂದು ಟ್ವೀಟ್ ಮಾಡಿದ್ದಾರೆ.

ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಹಾರ್ದಿಕ್ ಪಾಂಡ್ಯ ಅವರು ನಟರಾಜನ್ ಗೆ ಹಂಚುವ ಚಿತ್ರವನ್ನು ಸ್ವತ: ಹಾರ್ದಿಕ್ ಪಾಂಡ್ಯ ಅವರೇ ಟ್ವಿಟರ್ ಖಾತೆಯಲ್ಲಿ ಹಂಚಿದ್ದಾರೆ. 

ಸರಣಿಯ ಮೊದಲ ಪಂದ್ಯದಲ್ಲಿ ನಟರಾಜನ್ 4 ಓವರ್ ಮಾಡಿ 30 ರನ್ ನೀಡಿ 3 ವಿಕೆಟ್ ಪಡೆದಿದ್ದರು. 2ನೇ ಪಂದ್ಯದಲ್ಲಿ 4 ಓವರ್ ಮಾಡಿ ಕೇವಲ 20 ರನ್ ನೀಡಿ, 2 ವಿಕೆಟ್ ಪಡೆದಿದ್ದರು. ಅಂತಿಮ ಪಂದ್ಯದಲ್ಲಿ 4 ಓವರ್ ಮಾಡಿ 33 ರನ್ ನೀಡಿ 1 ವಿಕೆಟ್ ಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.