ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲೇ ಮುಂದುವರೆದ ಕೊಹ್ಲಿ, ಟಾಪ್ 50ರಲ್ಲಿ ಸ್ಥಾನ ಪಡೆದ ಪಾಂಡ್ಯ!
ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಅರ್ಧಶತಕ ಗಳಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ದುಬೈ: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಅರ್ಧಶತಕ ಗಳಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.
ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಮವಾಗಿ ಎರಡನೇ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 89 ಮತ್ತು 63 ರನ್ ಬಾರಿಸಿದ್ದರು. ಇನ್ನು ಕೊಹ್ಲಿ 870 ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಮಂಡಿರಜ್ಜು ಗಾಯದಿಂದಾಗಿ ಏಕದಿನ ಸರಣಿಯನ್ನು ಕಳೆದುಕೊಂಡಿದ್ದರೂ, ರೋಹಿತ್ ಶರ್ಮಾ(842) ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನ ನಾಯಕ ಬಾಬರ್ ಅಜಾಂಗಿಂತ ಐದು ಪಾಯಿಂಟ್ ಮುಂದಿದ್ದಾರೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2019ರ ನಂತರ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ 90 ರನ್ ಮತ್ತು ಮೂರನೇ ಪಂದ್ಯದಲ್ಲಿ 92 ರನ್ ಗಳಿಸಿ 49ನೇ ಸ್ಥಾನಕ್ಕೆ ಜಿಗಿದಿದ್ದಾರೆ. 553 ಅಂಕಗಳೊಂದಿಗೆ ಅಗ್ರ 50 ಬ್ಯಾಟ್ಸ್‌ಮನ್‌ಗಳಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಬೌಲಿಂಗ್‌ನಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ (722) ಮತ್ತು ಅಫ್ಗಾನ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್(701) ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


