ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಕೆಆರ್ ಸ್ಪಿನ್ನರ್ ವರುಣ್ ಚಕ್ರವರ್ತಿ
ಕೋಲ್ಕತಾ ನೈಟ್ ರೈಡರ್ಸ್ ಸ್ಪಿನ್ನರ್ ವರುಣ್ ಚಕ್ರವರ್ತಿ ಕಳೆದ ಕೆಲ ತಿಂಗಳಿಂದ ಸುದ್ದಿಯಲ್ಲಿದ್ದಾರೆ.

ಚೆನ್ನೈ: ಕೋಲ್ಕತಾ ನೈಟ್ ರೈಡರ್ಸ್ ಸ್ಪಿನ್ನರ್ ವರುಣ್ ಚಕ್ರವರ್ತಿ ಕಳೆದ ಕೆಲ ತಿಂಗಳಿಂದ ಸುದ್ದಿಯಲ್ಲಿದ್ದಾರೆ. ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಕೀ ಸ್ಪಿನ್ನರ್ ಆಗಿ ವಿಕೆಟ್‌ಗಳನ್ನು ಕಿತ್ತಿದ್ದ ವರುಣ್ ಚಕ್ರವರ್ತಿ ಆಸ್ಟ್ರೇಲಿಯಾ ಪ್ರವಾಸದ ಟಿ20 ಭಾರತ ತಂಡಕ್ಕೆ ಆಯ್ಕೆಯಾಗಿದ್ದರು.
ಆದರೆ, ಗಾಯದಿಂದಾಗಿ ಆಸ್ಟ್ರೇಲಿಯಾ ವಿಮಾನ ಹತ್ತಲಿಲ್ಲ. ಇವರ ಸ್ಥಾನಕ್ಕೆ ತಮ್ಮದೇ ರಾಜ್ಯದವರಾದ ಎಡಗೈ ವೇಗಿ ಟಿ ನಟರಾಜನ್‌ಗೆ ಅವಕಾಶ ನೀಡಲಾಯಿತು. ಅದರಂತೆ ನಟರಾಜನ್ ಸಿಕ್ಕ ಅವಕಾಶವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಂಡರು. ಆ ಮೂಲಕ ತಮ್ಮ ಸ್ಥಾನವನ್ನು ಟೀಂ ಇಂಡಿಯಾದಲ್ಲಿ ಗಟ್ಟಿ ಮಾಡಿಕೊಂಡರು.
ಇದೀಗ ವರುಣ್ ಚಕ್ರವರ್ತಿ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಇತ್ತೀಚೆಗೆ ಅವರು ದೀರ್ಘ ಕಾಲದ ಗೆಳತಿ ನೇಹಾ ಖೇಡೆಕರ್ ಅವರನ್ನು ವಿವಾಹವಾಗಿದ್ದಾರೆ. ಎರಡು ಬಾರಿ ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ, ನೂತನ ಜೋಡಿಗೆ ಶುಭ ಹಾರೈಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


