ವೇಗಿ ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ನಮ್ಮ ಬೌಲಿಂಗ್ ದಾಳಿ ಪ್ರಬಲವಾಗಿದೆ: ಅಜಿಂಕ್ಯ ರಹಾನೆ
ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ಆಡಿಲೇಡ್: ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 17 ರಂದು ನಡೆಯಲಿದೆ.
ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಇದು ಗುಲಾಬಿ ಚೆಂಡಿನೊಂದಿಗೆ ಆಡಲಾಗುತ್ತದೆ. ಈ ಪ್ರವಾಸಕ್ಕಾಗಿ, ಅನುಭವಿ ವೇಗದ ಬೌಲರ್ ಇಶಾಂತ್ ಗಾಯದಿಂದಾಗಿ ತಂಡದಲ್ಲಿ ಸ್ಥಾನ ಪಡೆದಿಲ್ಲ.
"ನನ್ನ ಪ್ರಕಾರ, ನಾವು ಬಲವಾದ ಬೌಲಿಂಗ್ ದಾಳಿಯನ್ನು ಹೊಂದಿದ್ದೇವೆ. ಆದರೆ ಹೌದು ನಾವು ಹಿರಿಯ ವೇಗದ ಬೌಲರ್ ಆಗಿರುವ ಇಶಾಂತ್ ಮಾರಕ ದಾಳಿಯನ್ನು ಖಂಡಿತವಾಗಿಯೂ ಕಳೆದುಕೊಳ್ಳುತ್ತೇವೆ ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ರಹಾನೆ ಹೇಳಿದರು.
ಐಪಿಎಲ್ ಸಮಯದಲ್ಲಿ ಪಕ್ಕೆಲುಬಿನ ಗಾಯದ ಸಮಸ್ಯೆಗೆ ಗುರಿಯಾಗಿದ್ದ ಇಶಾಂತ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಆದಾಗ್ಯೂ, ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ವೇಗದ ದಾಳಿಯು ಆಸ್ಟ್ರೇಲಿಯನ್ನರಿಗೆ ಮಾರಕವಾಗಲಿದೆ ಎಂದು ರಹಾನೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿರುವ ಉಮೇಶ್ ಯಾದವ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್ ಅವರೊಂದಿಗೆ ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ, ಅವರೆಲ್ಲರೂ ನಿಜವಾಗಿಯೂ ಅದ್ಭುತ ಮತ್ತು ಅನುಭವಿಗಳು. ಈ ಪರಿಸ್ಥಿತಿಗಳಲ್ಲಿ ಹೇಗೆ ಬೌಲಿಂಗ್ ಮಾಡುಬೇಕು ಎಂಬುದು ಅವರಿಗೆ ತಿಳಿದಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


