ಕ್ರಿಕೆಟ್

ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ಕೊಹ್ಲಿ
Published On :

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಅಡಿಲೇಡ್ ನ ಅಡಿಲೇಡ್ ಓವಲ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಸಿಸ್ ಪ್ರವಾಸದಲ್ಲಿ ಏಕದಿನ ಸರಣಿ ಕಳೆದುಕೊಂಡರೂ ಟಿ20 ಸರಣಿಯನ್ನು ತಮ್ಮದಾಗಿಸಿಕೊಂಡಿರುವ ಭಾರತ ತಂಡ  ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸುವ ಹುಮ್ಮಸ್ಸಿನಲ್ಲಿದೆ.

ಇನ್ನು ಕೊಹ್ಲಿ ಟಾಸ್ ಗೆದ್ದ ಪಂದ್ಯಗಳಲ್ಲಿ ಭಾರತದ ಗೆಲುವಿನ ಪ್ರಮಾಣ ಹೆಚ್ಚಿದ್ದು, ಈ ಹಿಂದೆ ಕೊಹ್ಲಿ 26 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದು, ಈ ಪೈಕಿ 21 ಪಂದ್ಯಗಳಲ್ಲಿ ಭಾರತ ತಂಡ ಜಯಗಳಿಸಿದೆ. 4 ಪಂದ್ಯ ಡ್ರಾ ಆಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಇದೇ ಅಜೇಯ ದಾಖಲೆ ಮುಂದುವರೆಯುತ್ತದೆಯೇ ಎಂಬುದನ್ನು  ಕಾದು ನೋಡಬೇಕಿದೆ.

ತಂಡಗಳು:
ಆಸ್ಟ್ರೇಲಿಯಾ: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ ಮತ್ತು ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್

ಭಾರತ: ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಹನುಮವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.