2ನೇ ದಿನದಾಟದ ಅಂತ್ಯಕ್ಕೆ 2ನೇ ಇನ್ನಿಂಗ್ಸ್ ನಲ್ಲಿ ಭಾರತ 9/1, ಆಸಿಸ್ ವಿರುದ್ಧ 62 ರನ್ ಗಳ ಮುನ್ನಡೆ
ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು.

ಅಡಿಲೇಡ್: ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು.
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸಾಧಾರಣ ಮೊತ್ತದ ಹೊರತಾಗಿಯೂ ಪಂದ್ಯದ ಮೇಲೆ ಟೀಂ ಇಂಡಿಯಾ ಹಿಡಿತ ಸಾಧಿಸಿದ್ದು, ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 191 ರನ್ ಗಳಿಗೆ ಕಟ್ಟಿಹಾಕಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗಳಿಸಿದರೆ, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸಿಸ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಹೋರಾಟಕ್ಕೆ ತತ್ತರಿಸಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆಸಿಸ್ ಪರ ಲಾಬು ಶ್ಚಾಘ್ನೆ 47 ರನ್ ಮತ್ತು ನಾಯಕ ಟಿಮ್ ಪೈನ್ ಅಜೇಯ 73 ರನ್ ಗಳನ್ನು ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟ್ಸ್ ಮನ್ ಕೂಡ ಗ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರಲು ಭಾರತೀಯ ಬೌಲರ್ ಗಳು ಆಸ್ಪದ ನೀಡಲಿಲ್ಲ.
ಪರಿಣಾಮ ಆಸ್ಟ್ರೇಲಿಯಾ ತಂಡ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 53 ರನ್ ಗಳ ಹಿನ್ನಡೆ ಅನುಭವಿಸಿದೆ. ಭಾರತದ ಆರ್ ಆಶ್ವಿನ್ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ಮತ್ತು ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.
2ನೇ ದಿನದಾಟದ ಅಂತ್ಯಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 9/1, ಆಸಿಸ್ ವಿರುದ್ಧ 62 ರನ್ ಗಳ ಮುನ್ನಡೆ
ಇನ್ನು 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡನೇ ಇನ್ನಿಂಗ್ಸ್ ನಲ್ಲಿ ಒಂದು ವಿಕೆಟ್ ಗೆ 9 ರನ್ ಗಳಿಸಿದ್ದು, ಆ ಮೂಲಕ ಒಟ್ಟಾರೆ 62 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ಪರ 2ನೇ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಕೇವಲ 4 ರನ್ ಗಳಿಸಿ ಪ್ಯಾಟ್ ಕಮಿನ್ಸ್ ವಿಕೆಟ್ ಒಪ್ಪಿಸಿದರು. ಬಳಿಕ ಬಾಲಂಗೋಚಿ ಆಟಗಾರನಾಗಿ ಜಸ್ ಪ್ರೀತ್ ಬುಮ್ರಾ ಕ್ರೀಸ್ ಗೆ ಆಗಮಿಸಿದರು. ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದ್ದು, 5 ರನ್ ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು ಜಸ್ ಪ್ರೀತ್ ಬುಮ್ರಾ 3ನೇ ದಿನಕ್ಕೆ ಕ್ರೀಸ್ ಕಾಯ್ದು ಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


