ಐಸಿಸಿಯಲ್ಲಿ ಬಿಸಿಸಿಐ ಪ್ರತಿನಿಧಿಸಲಿರುವ ಕಾರ್ಯದರ್ಶಿ ಜೈ ಷಾ
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜೈ ಷಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ (ಐಸಿಸಿ) ಬಿಸಿಸಿಐ ಪ್ರತಿನಿಧಿಯಾಗಲಿದ್ದಾರೆ.

ಅಹಮದಾಬಾದ್: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜೈ ಷಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ (ಐಸಿಸಿ) ಬಿಸಿಸಿಐ ಪ್ರತಿನಿಧಿಯಾಗಲಿದ್ದಾರೆ.
ಬಿಸಿಸಿಐ ತನ್ನ 89 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಗುರುವಾರ ಇಲ್ಲಿ ನಡೆಸಿತು, ಇದರಲ್ಲಿ ಜೈ ಷಾ ಐಸಿಸಿಯಲ್ಲಿ ಬಿಸಿಸಿಐ ಪ್ರತಿನಿಧಿಯಾಗಿ ಆಯ್ಕೆಯಾದರು. ಏತನ್ಮಧ್ಯೆ, 2021 ಟಿ-20 ವಿಶ್ವಕಪ್‌ಗೆ ಐಸಿಸಿಗೆ ತೆರಿಗೆ ವಿನಾಯಿತಿ ನೀಡಲು ಬಿಸಿಸಿಐ ಸಮಯ ಕೋರಿದೆ.
ಇದಕ್ಕಾಗಿ ಬಿಸಿಸಿಐ ಭಾರತ ಸರ್ಕಾರದಿಂದ ಅನುಮತಿ ಪಡೆಯಬೇಕಾಗಿರುತ್ತದೆ. ಮತ್ತು ನಂತರ ಮಾತ್ರ ಈ ನಿಟ್ಟಿನಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. 31 ಡಿಸೆಂಬರ್ 2020 ರೊಳಗೆ ಬಿಸಿಸಿಐ ಐಸಿಸಿಗೆ ಉತ್ತರಿಸಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


