ಮೆಲ್ಬೋರ್ನ್ ನಲ್ಲಿ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾ
ಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗುರುವಾರ ಇಲ್ಲಿ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ.

ಮೆಲ್ಬೋರ್ನ್: ಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗುರುವಾರ ಇಲ್ಲಿ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ.
ಡಿಸೆಂಬರ್ ಮಧ್ಯೆದಲ್ಲಿ ಭಾರತದಿಂದ ಸಿಡ್ನಿಗೆ ಆಗಮಿಸಿದ ರೋಹಿತ್, 14 ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಪೂರೈಸಿದ ನಂತರ ಬುಧವಾರ ಜೈವಿಕ ಸುರಕ್ಷಿತ ತಾಣದಲ್ಲಿರುವ ಭಾರತ ತಂಡವನ್ನು ಸೇರಿಕೊಂಡರು. ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಕ್ಯಾಚ್ ಗಳ ಅಭ್ಯಾಸ ಮಾಡುತ್ತಿರುವ ಚಿತ್ರವನ್ನು ಗುರುವಾರ ಬಿಸಿಸಿಐ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದೆ.
ರೋಹಿತ್ ಫಿಟ್ನೆಸ್ ಭಾರತ ತಂಡಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಏಕೆಂದರೆ ನವೆಂಬರ್ 10ಕ್ಕೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಿದ ನಂತರ ರೋಹಿತ್ ಇದುವರೆಗೂ ಆಡಿಲ್ಲ.
ಐಪಿಎಲ್ ವೇಳೆ ಗಾಯಗೊಂಡ ಕಾರಣ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ರೋಹಿತ್ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ರೋಹಿತ್ ಅವರ ಈ ನಿರ್ಧಾರಕ್ಕೆ ಕಾಯಂ ನಾಯಕ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದರು.
ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಸರಣಿಗಳು ಮತ್ತು ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿರುವ ರೋಹಿತ್ ಇದೀಗ ಕೊನೆಯ ಎರಡು ಟೆಸ್ಟ್ ಗಳಲ್ಲಿ ಆಡುವ ಸಾಧ್ಯತೆ ಇದೆ. ಆದರೆ ಇದು ಇನ್ನೂ ಖಚಿತಗೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


