ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮೇಲೆ ಗುಡುಗಿದ ಸೆಹ್ವಾಗ್: ಕಾರಣ ಏನು ಗೊತ್ತಾ?
ಭಾರತ ಕ್ರಿಕೆಟ್ ತಂಡದಲ್ಲಿ ಆಟಗಾರರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆೆ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್ ಅವರು ಟೀಮ್ ಮ್ಯಾನೇಜ್‌ಮೆಂಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ನವದೆಹಲಿ: ಭಾರತ ಕ್ರಿಕೆಟ್ ತಂಡದಲ್ಲಿ ಆಟಗಾರರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆೆ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್ ಅವರು ಟೀಮ್ ಮ್ಯಾನೇಜ್‌ಮೆಂಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ತಂಡದಲ್ಲಿ ಆಟಗಾರರನ್ನು ಅಂತಿಮ 11ರಲ್ಲಿ ಆಡಿಸುವ ಹಾಗೂ ಕೈಬಿಡುವ ಬಗ್ಗೆ ಸದ್ಯದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ರೀತಿಯಲ್ಲೇ ನಡೆದುಕೊಳ್ಳುತ್ತಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರನ್ನು ಆಡುವ 11 ರ ಬಳಗದಿಂದ ಕೈಬಿಟ್ಟಿರುವ ನಿರ್ಧಾರ ಕುರಿತಾಗಿ ಕಿಡಿ ಕಾರಿದ ವೀರೇಂದ್ರ ಸೆಹ್ವಾಗ್, ಮ್ಯಾಚ್ ವಿನ್ನಿಂಗ್ ಆಟಗಾರ ಎಂದ ಮೇಲೆ ಆತನನ್ನು ಹೊರಗಿಟ್ಟಿರುವುದಾದರೂ ಏಕೆ? ಎಂದು ಪ್ರಶ್ನಿಸಿದ್ದಾರೆ.
2012ರಲ್ಲಿ ಸಚಿನ್ ತೆಂಡೂಲ್ಕರ್, ಗೌತಮ್ ಗಂಭೀರ್ ಮತ್ತು ನಾನು ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಗಳಾಗಿದ್ದೆವು. ನಾವು ಮಂಧಗತಿಯ ಫೀಲ್ಡರ್‌ಗಳೆಂದು ಪ್ರತಿ ಪಂದ್ಯಗಳಲ್ಲಿ ಒಬ್ಬರನ್ನಾಡಿಸಿ ಮತ್ತೊಬ್ಬರನ್ನು ಕೈಬಿಡಲಾಗುತ್ತಿತ್ತು. ಈ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಚರ್ಚೆ ಮಾಡಲಾಗಿರಲಿಲ್ಲ. ಬದಲಾಗಿ ಮಾಧ್ಯಮಗಳಲ್ಲಿ ಈ ವಿಚಾರ ಹರಿದಾಡಿತ್ತು ಎಂದು ಧೋನಿ ಬಗ್ಗೆ ಮಾಜಿ ಸ್ಪೋಟಕ ಬ್ಯಾಟ್ಸ್‌ಮನ್ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


