ಕ್ರಿಕೆಟ್

ಸರಣಿ ಶ್ರೇಷ್ಠ ಕೆಎಲ್ ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲೂ ಅತ್ಯುತ್ತಮ ಸಾಧನೆ, ಟಾಪ್ 10ರಲ್ಲಿ ಕೊಹ್ಲಿ, ರೋಹಿತ್!

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಇದೀಗ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲೂ ಅಮೋಘ ಸಾಧನೆ ಮಾಡಿದ್ದಾರೆ.

ಸರಣಿ ಶ್ರೇಷ್ಠ ಕೆಎಲ್ ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲೂ ಅತ್ಯುತ್ತಮ ಸಾಧನೆ, ಟಾಪ್ 10ರಲ್ಲಿ ಕೊಹ್ಲಿ, ರೋಹಿತ್!
ಕೆಎಲ್ ರಾಹುಲ್
Published On :

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಇದೀಗ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲೂ ಅಮೋಘ ಸಾಧನೆ ಮಾಡಿದ್ದಾರೆ. 

ಐಸಿಸಿ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಕೆಎಲ್ ರಾಹುಲ್ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ರ್ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದ ರಾಹುಲ್ ನ್ಯೂಜಿಲ್ಯಾಂಡ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದರಿಂದ 2ನೇ ಸ್ಥಾನಕ್ಕೇರಿದ್ದಾರೆ. 

ಇದೇ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಪ್ 10ನಲ್ಲಿ ಸ್ಥಾನ ಪಡೆದಿದ್ದು 9ನೇ ಸ್ಥಾನದಲ್ಲಿದ್ದಾರೆ. ಇನ್ನು ನ್ಯೂಜಿಲ್ಯಾಂಡ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ 3 ಸ್ಥಾನಗಳ ಜಿಗಿತ ಕಂಡು 10ನೇ ಸ್ಥಾನದಲ್ಲಿದ್ದಾರೆ. 

ನ್ಯೂಜಿಲ್ಯಾಂಡ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.