ನಾಳೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ಪಾದಾರ್ಪಣೆ
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ.

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಬಳಿಕ ಭಾರತ ತಂಡ ನಾಳೆಯಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧತೆ ನಡೆಸುತ್ತಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಾಯಕ ವಿರಾಟ್ ಕೊಹ್ಲಿ, ಪೃಥ್ವಿ ಶಾ ಮತ್ತು ಮಯಾಂಕ್ ಅಗರ್ವಾಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾದ ಶಿಖರ್ ಧವನ್ ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಪೃಥ್ವಿ ಶಾ ಮತ್ತು ಮಯಾಂಕ್ ಅಗರ್ವಾಲ್ ನಾಳೆ ಚೊಚ್ಚಲ ಏಕದಿನ ಪಂದ್ಯವಾಡಲಿದ್ದಾರೆ.
ಅನಿರೀಕ್ಷಿತವಾಗಿ ರೋಹಿತ್ ಶರ್ಮಾ ಕೂಡ ಗಾಯದಿಂದಾಗಿ ಏಕದಿನ ಮತ್ತು ಟೆಸ್ಟ್ ಸರಣಿಗಳಿಂದ ಹೊರಗುಳಿದಿದ್ದಾರೆ. ಅವರ ಬದಲು ಮಯಾಂಕ್ ಅಗರ್ವಾಲ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ.
“ರೋಹಿತ್ ಶರ್ಮಾ ಏಕದಿನ ಸರಣಿಗೆ ಅಲಭ್ಯರಾಗಿರುವುದು ಅನಿರೀಕ್ಷಿತ. ಈ ಸರಣಿಯ ಬಳಿಕ ಭಾರತಕ್ಕೆ ಯಾವುದೇ ಏಕದಿನ ಸರಣಿ ಇಲ್ಲ. ಹಾಗಾಗಿ, ಅವರು ಚೇತರಿಸಿಕೊಳ್ಳಲು ಸಾಕಷ್ಟು ಸಮಯವಿದೆ. ಪೃಥ್ವಿ ಶಾ ಇನಿಂಗ್ಸ್ ಆರಂಭಿಸಲಿದ್ದಾರೆ. ಕೆ.ಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ,’’ ಎಂದು ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಕಳೆದ ಏಕದಿನ ಸರಣಿ ಕಠಿಣವಾಗಿತ್ತು. ಮೊದಲನೇ ಪಂದ್ಯದಲ್ಲಿ ನಾವು ಸೋಲು ಅನುಭವಿಸಿದ್ದೆವು. ನಂತರ, ಸತತ ಎರಡು ಪಂದ್ಯಗಳಲ್ಲಿ ಗೆದ್ದು 2-1 ಅಂತರದಲ್ಲಿ ಏಕದಿನ ಸರಣಿ ಜಯ ಸಾಧಿಸಿದೆವು. ಈ ಸರಣಿ ನಮ್ಮಲ್ಲಿ ವಿಶ್ವಾಸ ಹೆಚ್ಚಿಸಿದೆ. ನಮ್ಮ ಯೋಜನೆಗಳ ಬಗ್ಗೆ ನಮಗೆ ನಂಬಿಕೆ ಇದೆ. ಆದರೆ, ನ್ಯೂಜಿಲೆಂಡ್ ತಂಡವನ್ನು ಎದುರಿಸುವುದು ಸುಲಭವಲ್ಲ,’’ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


