2 ಏಕದಿನ ಪಂದ್ಯಗಳಿಗೆ ವಿಲಿಯಮ್ಸನ್ ಇಲ್ಲ: ಮಾರ್ಕ್ ಚಾಪ್ಮನ್‌ಗೆ ಅವಕಾಶ
ಭಾರತದ ವಿರುದ್ಧ ಮುಂಬರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ನಿಯಮಿತ ನಾಯಕ ಕೇನ್ ವಿಲಿಯಮ್ಸನ್ ಅವರು ಹೊರಗುಳಿಯಲಿದ್ದಾರೆ. ಇವರ ಬದಲು ನ್ಯೂಜಿಲೆಂಡ್ ಎ ಪರ ಅದ್ಭುತ ಪ್ರದರ್ಶನ ತೋರಿದ್ದ ಮಾರ್ಕ್ ಚಾಪ್ಮನ್ ಸ್ಥಾನ ಪಡೆದಿದ್ದಾರೆ.

ನವದೆಹಲಿ: ಭಾರತದ ವಿರುದ್ಧ ಮುಂಬರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ನಿಯಮಿತ ನಾಯಕ ಕೇನ್ ವಿಲಿಯಮ್ಸನ್ ಅವರು ಹೊರಗುಳಿಯಲಿದ್ದಾರೆ. ಇವರ ಬದಲು ನ್ಯೂಜಿಲೆಂಡ್ ಎ ಪರ ಅದ್ಭುತ ಪ್ರದರ್ಶನ ತೋರಿದ್ದ ಮಾರ್ಕ್ ಚಾಪ್ಮನ್ ಸ್ಥಾನ ಪಡೆದಿದ್ದಾರೆ.
ಕಳೆದ ಬುಧವಾರ ಹ್ಯಾಮಿಲ್ಟನ್‌ನಲ್ಲಿ ನಡೆದಿದ್ದ ಮೂರನೇ ಟಿ-20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಕೇನ್ ವಿಲಿಯಮ್ಸನ್ ಅವರ ಭುಜಕ್ಕೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಟಿ-20 ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಟಿ-20 ಸರಣಿಯಲ್ಲಿ ನ್ಯೂಜಿಲೆಂಡ್ 0-5 ಅಂತರದಲ್ಲಿ ಭಾರತದ ಎದುರು ವೈಟ್‌ವಾಷ್ ಅನುಭವಿಸಿತ್ತು.
"ಗಾಯಾಳು ಕೇನ್ ವಿಲಿಯಮ್ಸನ್ ಅವರನ್ನು ಸ್ಕ್ಯಾನ್‌ಗೆ ಒಳಪಡಿಸಲಾಗಿತ್ತು. ಆದರೆ, ಅವರ ಗಾಯದ ಪ್ರಮಾಣ ಗಂಭೀರವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಅವರು ಇನ್ನೇರಡು ದಿನಗಳ ಕಾಲ ವಿಶ್ರಾಂತಿ ಪಡೆದ ಬಳಿಕ ತಂಡ ಕೂಡಿಕೊಳ್ಳಲಿದ್ದಾರೆ,'' ಎಂದು ತಂಡದ ಫಿಜಿಯೊ ವಿಜಯ್ ವಲ್ಲಭ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


