ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್; ಕಿವೀಸ್ ಗೆ 4 ವಿಕೆಟ್ ಜಯ
ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್ ಪ್ರವಾಸಿ ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಹ್ಯಾಮಿಲ್ಟನ್: ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್ ಪ್ರವಾಸಿ ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಹ್ಯಾಮಿಲ್ಟನ್ ನ ಸೆಡಾನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 347 ರನ್ ಗಳಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ (103), ಕೊಹ್ಲಿ (51)ಮತ್ತು ರಾಹುಲ್ (79) ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ಭಾರತ 347ರನ್ ಪೇರಿಸಿತು.
ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ರಾಸ್ ಟೇಲರ್ ಶತಕ (ಅಜೇಯ 109 ರನ್), ನಿಕೋಲಸ್ (78 ರನ್), ಲಾಥಮ್ (69 ರನ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. ಕಿವೀಸ್ ಗೆ ಮಾರ್ಟಿನ್ ಗಪ್ಟಿಲ್ (32 ರನ್) ಮತ್ತು ನಿಕೋಲಸ್ (78 ರನ್) ಭರ್ಜರಿ ಆರಂಭ ಒದಗಿಸಿದರು. ಇದನ್ನೇ ಮುಂದುವರೆಸಿದ ರಾಸ್ ಟೇಲರ್ ಸ್ಪೋಟಕ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದರು. ಕೇವಲ 84 ಎಸೆತಗಳನ್ನು ಎದುರಿಸಿದ ಟೇಲರ್ 10 ಬೌಂಡರಿ ಹಾಗೂ 4 ಸಿಕ್ಸರ್ ಗಳ ನೆರವಿನಿಂದ 109ರನ್ ಕಲೆಹಾಕಿ ನ್ಯೂಜಿಲೆಂಡ್ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ಟೇಲರ್ ಗೆ ಲಾಥಮ್ ಮತ್ತು ಸ್ಯಾಂಥನರ್ ಉತ್ತಮ ಸಾಥ್ ನೀಡಿದರು. ಅಂತಿಮವಾಗಿ ನ್ಯೂಜಿಲೆಂಡ್ ತಂಡ ಭಾರತ ನೀಡಿದ್ದ 348ರನ್ ಗಳ ಬೃಹತ್ ಗುರಿಯನ್ನು 6 ವಿಕೆಟ್ ಕಳೆದುಕೊಂಡು 48.1 ಓವರ್ ಗಳಲ್ಲಿ ಗುರಿ ಮುಟ್ಟಿತು. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಿವೀಸ್ ಪಡೆ 1-0 ಅಂತರದ ಮುನ್ನಡೆ ಸಾಧಿಸಿದೆ.
Related Article
ಭಾರತದ ಭರ್ಜರಿ ಬ್ಯಾಟಿಂಗ್: ಹ್ಯಾಮಿಲ್ಟನ್ ನಲ್ಲಿ ದಾಖಲಾಯ್ತು 2ನೇ ಗರಿಷ್ಠ ಮೊತ್ತ!
ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಐಯ್ಯರ್-ರಾಹುಲ್ ಭರ್ಜರಿ ಜೊತೆಯಾಟ
ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಶತಕ ವೀರ ಶ್ರೇಯಸ್ ಅಯ್ಯರ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


