ಕ್ರಿಕೆಟ್

ಅಂಡರ್ 19 ವಿಶ್ವಕಪ್ ಫೈನಲ್‌: ಹಾಲಿ ಚಾಂಪಿಯನ್ ಭಾರತದ ವಿರುದ್ಧ ಬಾಂಗ್ಲಾ ಸೆಣಸಾಟ!

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅದಾಗಲೇ ಫೈನಲ್ ಪ್ರವೇಶಿಸಿದ್ದು ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಬೀಗಿರುವ ಬಾಂಗ್ಲಾದೇಶ ಭಾರತದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

ಅಂಡರ್ 19 ವಿಶ್ವಕಪ್ ಫೈನಲ್‌: ಹಾಲಿ ಚಾಂಪಿಯನ್ ಭಾರತದ ವಿರುದ್ಧ ಬಾಂಗ್ಲಾ ಸೆಣಸಾಟ!
ಭಾರತ-ಬಾಂಗ್ಲಾ
Published On :

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅದಾಗಲೇ ಫೈನಲ್ ಪ್ರವೇಶಿಸಿದ್ದು ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಬೀಗಿರುವ ಬಾಂಗ್ಲಾದೇಶ ಭಾರತದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

ನ್ಯೂಜಿಲ್ಯಾಂಡ್ ವಿರುದ್ಧ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಫೆಬ್ರವರಿ 9ರಂದು ಪೊಚೆಫ್‌ಸ್ಟ್ರೂಮ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. 

ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 211 ರನ್ ಪೇರಿಸಿತ್ತು. 212 ರನ್ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಇನ್ನು 35 ಎಸೆತಗಳು ಬಾಕಿ ಇರುವಂತೆ ಬಾಂಗ್ಲಾ ಗೆಲುವಿನ ನಗೆ ಬೀರಿತು. 

ಈ ಮೂಲಕ ಬಾಂಗ್ಲಾದೇಶ ಮೊದಲ ಬಾರಿಗೆ ಫೈನಲ್ ಪ್ರವೇಸಿಶಿದ್ದು ಹಾಲಿ ಚಾಂಪಿಯನ್ ಬಲಿಷ್ಠ ಭಾರತ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.