2ನೇ ಏಕದಿನ: ಭಾರತಕ್ಕೆ ಗೆಲ್ಲಲು 274 ರನ್ ಗಳ ಗುರಿ ನೀಡಿದ ನ್ಯೂಜಿಲೆಂಡ್
ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.

ಆಕ್ಲೆಂಡ್: ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.
ಆಕ್ಲೆಂಡ್ ನ ಈಡನ್ ಪಾರ್ಕ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಮಾರ್ಟಿನ್ ಗಪ್ಟಿಲ್ (79 ರನ್), ಹೆನ್ರಿ ನಿಕೋಲಸ್ (41 ರನ್) ಮತ್ತು ರಾಸ್ ಟೇಲರ್ (ಅಜೇಯ 73 ರನ್) ಸಮಯೋಚಿತ ಬ್ಯಾಟಿಂಗ್ ನೆರವಿನಿಂದಾಗಿ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 273 ರನ್ ಪೇರಿಸಿತು. ಆ ಮೂಲಕ ಭಾರತಕ್ಕೆ ಗೆಲ್ಲಲು 274 ರನ್ ಗಳ ಸವಾಲಿನ ಗುರಿ ನೀಡಿದೆ.
ನ್ಯೂಜಿಲೆಂಡ್ ತಂಡ ಅತ್ಯುತ್ತಮ ಆರಂಭ ಪಡೆದಿತ್ತಾದರೂ, ಮಧ್ಯಮ ಕ್ರಮಾಂಕದ ದಿಢೀರ್ ಕುಸಿತದಿಂದ ಕಿವೀಸ್ ಪಡೆಯ ರನ್ ವೇಗಕ್ಕೆ ಕಡಿವಾಣ ಬಿತ್ತು. ಆದರೆ ಅಂತಿಮ ಹಂತದಲ್ಲಿ 9ನೇ ವಿಕೆಟ್ ನಲ್ಲಿ ರಾಸ್ ಟೇಲರ್ ಮತ್ತು ಜೇಮಿಸನ್ ಜೋಡಿ ಮುರಿಯದ 76ರನ್ ಗಳ ದಾಖಲೆಯ ಜೊತೆಯಾಟವಾಡಿ ನ್ಯೂಜಿಲೆಂಡ್ ತಂಡ 250ರ ಗಡಿ ದಾಟುವಂತೆ ಮಾಡಿತು.
ಇನ್ನು ಭಾರತದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದರೆ, ನವದೀಪ್ ಸೈನಿ 2 ಮತ್ತು ಚಹಲ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


