ಅಂಡರ್ 19 ವಿಶ್ವಕಪ್: ಭಾರತ ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬಾಂಗ್ಲಾ!
ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಭಾರತ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಭಾರತ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 47.2 ಓವರ್ ಗಳಲ್ಲಿ 177 ರನ್ ಗಳಿಗೆ ಆಲೌಟ್ ಆಯಿತು. 178 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ 23 ಎಸೆತ ಬಾಕಿರುವಂತೆ 3 ವಿಕೆಟ್ ಗಳಿಂದ ಗೆದ್ದು ಬೀಗಿತು. ಮಳೆ ಕಾಟದಿಂದ ಓವರ್ ಗಳಿಗೆ ಕತ್ತರಿ ಬಿದ್ದಿತು. ಡಕ್ವರ್ತ್ ಲೂಯಿಸ್ ನಿಯಮದಂತೆ ಬಾಂಗ್ಲಾ ಗೆಲುವಿಗೆ 46 ಓವರ್ ಗಳಲ್ಲಿ 170 ರನ್ ಗಳ ಗುರಿ ನಿಗದಿ ಪಡಿಸಲಾಯಿತು.
ಭಾರತ ತಂಡ ಅದಾಗಲೇ ನಾಲ್ಕು ಬಾರಿ ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದ್ದು 5ನೇ ಬಾರಿ ಅವಕಾಶವನ್ನು ಕಳೆದುಕೊಂಡಿದೆ.
ಭಾರತ ಪರ ಜೈಸ್ವಾಲ್ 88, ತಿಲಕ್ ವರ್ಮಾ 38, ಜುರೇಲ್ 22 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


