31 ವರ್ಷಗಳ ನಂತರ ವೈಟ್ ವಾಶ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಮುಖಭಂಗ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೋಲುವ ಮೂಲಕ ಭಾರತ ತಂಡ ಬರೊಬ್ಬರಿ 31 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.

ಮೌಂಟ್‌ಮೌಂಗಾನುಯಿ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಸೋಲುವ ಮೂಲಕ ಭಾರತ ತಂಡ ಬರೊಬ್ಬರಿ 31 ವರ್ಷಗಳ ಬಳಿಕ ಏಕದಿನ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.
ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಐದು ವಿಕೆಟ್ ಗಳ ಸೋಲು ಕಂಡಿದ್ದು. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕೈ ಚೆಲ್ಲಿದೆ. ಇದು ಪ್ರವಾಸಿ ಭಾರತ ಕಳೆದ 31 ವರ್ಷಗಳಲ್ಲಿ ಎದುರಿಸಿದ ಮೊದಲ ವೈಟ್ ವಾಶ್ ಆಗಿದೆ.
ಈ ಹಿಂದೆ 1983-84ರಲ್ಲಿ ಭಾರತದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ 5-0 ಅಂತರದಲ್ಲಿ ವೈಟ್ ವಾಶ್ ಆಗಿತ್ತು. ಇದು ಭಾರತ ಕಂಡ ಮೊಟ್ಟ ಮೊದಲ ವೈಟ್ ವಾಶ್ ಆಗಿದೆ. ಆ ಬಳಿಕ 1988-89ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ಮತ್ತೆ 5-0 ಅಂತರದಲ್ಲಿ ವೈಟ್ ವಾಶ್ ಆಗಿತ್ತು. ಆ ಬಳಿಕ 2006-07ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಐದು ಪಂದ್ಯಗಳ ಏಕದಿನ ಸರಣಿಯನ್ನು 4-0 ಅಂತರದಲ್ಲಿ ಸೋತಿತ್ತು. ಒಂದು ಪಂದ್ಯ ರದ್ದಾಗಿತ್ತು.
ಇದೀಗ 31 ವರ್ಷಗಳ ಬಳಿಕ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ವೈಟ್ ವಾಶ್ ಮುಖಭಂಗಕ್ಕೀಡಾಗಿದೆ.
Related Article
3ನೇ ಏಕದಿನ: ಭಾರತದ ವಿರುದ್ಧ ಕಿವೀಸ್ ಗೆ 5 ವಿಕೆಟ್ ಗಳ ಭರ್ಜರಿ ಜಯ, 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


