ಹಿಂದೆಂದೂ ಆಡದಷ್ಟು ಕಳಪೆ ಆಟದಿಂದಲೇ ಸರಣಿ ಸೋತೆವು: ವಿರಾಟ್ ಕೊಹ್ಲಿ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಐದು ವಿಕೆಟ್‌ಗಳ ಸೋಲಿನಿಂದ ಸರಣಿಯನ್ನು 0-3ರಿಂದ ಕಳೆದುಕೊಂಡಿರುವ ಭಾರತದ ನಾಯಕ ವಿರಾಟ್ ಕೊಹ್ಲಿ, ತಂಡ ಹಿಂದೆಂದೂ ಆಡದಷ್ಟು ಕಳಪೆ ಆಟವಾಡಿದೆ ಎಂದು ಹೇಳಿದ್ದಾರೆ.

ಮೌಂಟ್ ಮಾಂಗನೂಯಿ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಐದು ವಿಕೆಟ್‌ಗಳ ಸೋಲಿನಿಂದ ಸರಣಿಯನ್ನು 0-3ರಿಂದ ಕಳೆದುಕೊಂಡಿರುವ ಭಾರತದ ನಾಯಕ ವಿರಾಟ್ ಕೊಹ್ಲಿ, ತಂಡ ಹಿಂದೆಂದೂ ಆಡದಷ್ಟು ಕಳಪೆ ಆಟವಾಡಿದೆ ಎಂದು ಹೇಳಿದ್ದಾರೆ.
ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ 3-0 ರಿಂದ ಭಾರತವನ್ನು ಸೋಲಿಸಿತು. ವಿರಾಟ್ ಪಂದ್ಯದ ನಂತರ, "ತಂಡವು ಈ ಮೊದಲು ಇಂತಹ ಕಳಪೆ ಆಟವನ್ನು ಪ್ರದರ್ಶಿಸಿರಲಿಲ್ಲ. ಆದರೆ ಅವಕಾಶಳನ್ನು ಬಳಸಿಕೊಳ್ಳುವಲ್ಲಿ ನಾವು ವಿಫಲವಾದೆವು. ಇದು ನಮ್ಮ ಸೋಲಿಗೆ ಕಾರಣವಾಗಿದೆ" ಎಂದಿದ್ದಾರೆ.
"ಸರಣಿಯನ್ನು ಒಮ್ಮೆ ಅವಲೋಕಿಸಿದಾಗ ಬ್ಯಾಟ್ಸ್ ಮನ್ ಗಳು ತಮ್ಮ ಕ್ಷಮತೆ ಪ್ರದರ್ಶಿಸಿದ್ದಾರೆ. ಮೇಲ್ಪಂಕ್ತಿಯ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲವಾದಾಗ ಮಧ್ಯಮ ಕ್ರಮಾಂಕಿತರು ರನ್ ಕಲೆ ಹಾಕಿದ್ದಾರೆ. ಆದರೆ ನಾವು ಫೀಲ್ಡಿಂಗ್ ಮತ್ತು ಬೌಲಿಂಗ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದೇವೆ” ಎಂದು ವಿರಾಟ್ ತಿಳಿಸಿದ್ದಾರೆ.
ಏಕದಿನ ಸರಣಿ ಗೆದ್ದ ಆತಿಥೇಯ ತಂಡ ಭಾರತ ತಂಡಕ್ಕಿಂತಲೂ ಉತ್ತಮ ಆಟವಾಡಿತು ಎಂಬುದನ್ನು ಒಪ್ಪಿಕೊಂಡ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಇದೀಗ ಫೆ. 21ರಂದು ವೆಲ್ಲಿಂಗ್ಟನ್‌ನಲ್ಲಿ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


