ಕ್ರಿಕೆಟ್

ಕೆಎಲ್ ರಾಹುಲ್‌ರಿಂದಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಪ್ರೇಕ್ಷಕರಾಗಿ ಉಳಿದ ರಿಷಭ್ ಪಂತ್!

ವಿಶ್ವಕಪ್ ನಂತರ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ತಂಡದಿಂದ ದೂರ ಸರಿದ ಬಳಿಕ ರಿಷಭ್ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಾಗಿತ್ತು, ಆದರೆ ನ್ಯೂಜಿಲೆಂಡ್ ಪ್ರವಾಸದಲ್ಲಿ...

ಕೆಎಲ್ ರಾಹುಲ್‌ರಿಂದಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಪ್ರೇಕ್ಷಕರಾಗಿ ಉಳಿದ ರಿಷಭ್ ಪಂತ್!
ರಿಷಬ್ ಪಂತ್
Published On :

ನವದೆಹಲಿ: ವಿಶ್ವಕಪ್ ನಂತರ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ತಂಡದಿಂದ ದೂರ ಸರಿದ ಬಳಿಕ ರಿಷಭ್ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಾಗಿತ್ತು, ಆದರೆ ನ್ಯೂಜಿಲೆಂಡ್ ಪ್ರವಾಸದಲ್ಲಿ ಅವರು ಕೇವಲ ಪ್ರೇಕ್ಷಕರಾಗಿ ಉಳಿದಿದ್ದಾರೆ. ಮತ್ತು ಇಲ್ಲಿಯವರೆಗೆ ಎಂಟು ಪಂದ್ಯಗಳಲ್ಲಿ ಅವರು ಒಂದು ಪಂದ್ಯದಲ್ಲೂ ಆಡಲು ಅವಕಾಶ ಪಡೆದಿಲ್ಲ. 

ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ವಿಶ್ವಕಪ್‌ನ ಸೆಮಿಫೈನಲ್ಸ್ನಲ್ಲಿ ಭಾರತವು ನ್ಯೂಜಿಲೆಂಡ್‌ನ ಕೈಯಲ್ಲಿ ಸೋಲು ಕಂಡಿತು. ಇದೇ ಪಂದ್ಯದಲ್ಲಿ ಎಂಎಸ್ ಧೋನಿ ಕೊನೆಯ ಓವರ್ ನಲ್ಲಿ ರನ್ ಔಟ್ ಆದರು. ಅಂದಿನಿಂದ ಧೋನಿ ಭಾರತೀಯ ತಂಡದಿಂದ ಹೊರಗಿದ್ದಾರೆ. ಅಲ್ಲದೆ, ಆಗಿನ ಆಯ್ಕೆ ಸಮಿತಿಯ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಕೂಡ ತಂಡದ ಗಮನವು ಭವಿಷ್ಯದ ಆಟಗಾರರತ್ತ ನೆಟ್ಟಿತ್ತು. ಮತ್ತು ಪಂತ್ ಅವರ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಸ್ಪಷ್ಟಪಡಿಸಿದ್ದರು.

ಆದರೆ ಕೆಎಲ್ ರಾಹುಲ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ರಿಷಬ್ ಪಂತ್ ಬೆಂಚ್ ಕಾಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.