ಮಾರ್ಚ್ 29ಕ್ಕೆ ಐಪಿಎಲ್ ಉದ್ಘಾಟನಾ ಪಂದ್ಯ, ಚೆನ್ನೈ-ಮುಂಬೈ ಮುಖಾಮುಖಿ
ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭವಾಗಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಈಗಾಗಲೇ 2020ರ ಐಪಿಎಲ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗ

ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭವಾಗಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಈಗಾಗಲೇ 2020ರ ಐಪಿಎಲ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ ಎಂದು ಟೂರ್ನಿ ಆಯೋಜಕರು ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮುಂಬರುವ ಆವೃತ್ತಿಯಲ್ಲಿ ಶನಿವಾರ ಡಬಲ್ ಹೆಡರ್ ಪಂದ್ಯಗಳು ಇರುವುದಿಲ್ಲ. ಲೀಗ್ ನಡೆಯುವ ಐದು ದಿನಗಳಿಂದ ಆರು ದಿನಗಳಿಗೆ ವಿಸ್ತರಿಸಲಾಗಿದೆ.
ವಾರಾಂತ್ಯದಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡಿಸಲಾಗುತ್ತದೆ. ಭಾನುವಾರ ಎರಡು ಪಂದ್ಯಗಳು ನಡೆದರೆ, ಶನಿವಾರ ಒಂದೇ ಪಂದ್ಯ ನಡೆಯಲಿದೆ.
ಮಾರ್ಚ್ 18 ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸ್ವದೇಶೀದಲ್ಲಿ ನಡೆಯುವ ಏಕದಿನ ರಣಿ ಕೊನೆಗೊಂಡ 11 ದಿನಗಳ ನಂತರ ಫ್ರ್ಯಾಂಚೈಸ್ ಆಧಾರಿತ ಈವೆಂಟ್ ಪ್ರಾರಂಭವಾಗಲಿದೆ.
ಲೀಗ್ ನಂತರ ನಾಕೌಟ್‌ಗಳ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಆದರೆ ಫೈನಲ್ ಪಂದ್ಯವನ್ನು ಮೇ 24 ರಂದು ನಿಗದಿಪಡಿಸಲಾಗಿದೆ.
ಕೊನೆಯ ಲೀಗ್ ಪಂದ್ಯ ಮೇ 17 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಬೆಂಗಳೂರಿನಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


