ಐಸಿಸಿ ಟಿ20 ಶ್ರೇಯಾಂಕದಲ್ಲಿ ಕುಸಿದ ಕೊಹ್ಲಿ!
ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 10 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ದುಬೈ: ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 10 ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಫೆ.17 ರಂದು ಪಟ್ಟಿ ಪ್ರಕಟಗೊಂಡಿದ್ದು, ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಅನುಕ್ರಮವಾಗಿ 2 ಹಾಗೂ 11 ನೇ ಸ್ಥಾನದಲ್ಲಿದ್ದಾರೆ. 3 ಪಂದ್ಯಗಳ ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಎರಡು ದ್ವಿಶತಕ ಸೇರಿ ಒಟ್ಟು 136 ರನ್ ಗಳನ್ನು ಗಳಿಸಿದ್ದ
ಬ್ಯಾಟಿಂಗ್ ವಿಭಾಗದಲ್ಲಿ ಇಂಗ್ಲೆಂಡ್ ನ ನಾಯಕ ಇಯಾನ್ ಮೋರ್ಗಾನ್ 687 ಅಂಕಗಳನ್ನು ಗಳಿಸಿ 9 ನೇ ಸ್ಥಾನಕ್ಕೆ ಏರಿದರು. ಪರಿಣಾಮ 673 ಅಂಕಗಳೊಂದಿಗಿರುವ ಕೊಹ್ಲಿ 10 ನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ 662 ಅಂಕಗಳೊಂದಿಗೆ 11 ನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಭಾರತ ತಂಡದ ವೇಗಿ ಜಸ್ಪ್ರಿತ್ ಬೂಮ್ರ 12 ನೇ ಸ್ಥಾನದಲ್ಲಿ ಸ್ಥಿರವಾಗಿದ್ದು ವೆಸ್ಟ್ ಇಂಡೀಸ್ ನ ಬೌಲರ್ ಶೆಲ್ಡನ್ ಕಾಟ್ರೆಲ್ ಜೊತೆ ಹಂಚಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾದ ಎಡಗೈ ಸ್ಪಿನ್ನರ್ ತಬ್ರೇಜ್ ಶಮ್ಸಿ ಟಾಪ್ 10 ರಲ್ಲಿದ್ದು, 8 ನೇ ಸ್ಥಾನ ಗಿಟ್ಟಿಸಿದ್ದಾರೆ. ಇನ್ನು ಆದಿಲ್ ರಶಿದ್ 6 ನೇ ಸ್ಥಾನದಲ್ಲಿದ್ದ ಆಂಡಿಲೆ ಫೆಹ್ಲುಕ್ವಾಯೊ ಅವರನ್ನು ಹಿಂದಿಕ್ಕಿ ಆ ಸ್ಥಾನವನ್ನು ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


