ಅಪಘಾತ: ಕೊದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವಿಂಡೀಸ್ ವೇಗಿ ಪಾರು
ವೆಸ್ಟ್ ಇಂಡೀಸ್ ತಂಡದ ಯುವ ವೇಗಿ ಒಶೇನ್ ಥಾಮಸ್ ರಸ್ತೆ ಅಪಘಾತವೊಂದರಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನವದೆಹಲಿ: ವೆಸ್ಟ್ ಇಂಡೀಸ್ ತಂಡದ ಯುವ ವೇಗಿ ಒಶೇನ್ ಥಾಮಸ್ ರಸ್ತೆ ಅಪಘಾತವೊಂದರಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಮೈಕಾದ ಸೇಂಟ್ ಕ್ಯಾಥರೀನ್ 2000ರ ಹೆದ್ದಾರಿಯಲ್ಲಿ ಒಶೇನ್ ತಮ್ಮ ಆಡಿ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಕಾರ್‌ನಲ್ಲಿದ್ದ ಏರ್ ಬ್ಯಾಗ್ಸ್ ಮತ್ತು ರಕ್ಷಣಾ ಸವಲತ್ತುಗಳು ಒಶೇನ್ ಪ್ರಾಣವನ್ನು ಉಳಿಸಿದೆ ಎನ್ನಲಾಗಿದೆ. ಹಾಗಾಗಿ ವಿಂಡೀಸ್ ವೇಗಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಕಳೆದ ಭಾನುವಾರ ಈ ಅಪಘಾತ ಸಂಭವಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒಶೇನ್ ಥಾಮಸ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೊನೆಯ ಬಾರಿ ಕೆರಿಬಿಯನ್ ಪಡೆಯ ಪರ ಆಡಿದ್ದ ಥಾಮಸ್, ಮೂರು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಆದರೆ, ಫೆ.22ರಿಂದ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅವರನ್ನು ತಂಡದಿಂದ ಕೈಬಿಡಲಾಗಿತ್ತು.
ವೆಸ್ಟ್ ಇಂಡೀಸ್ ಪರ 20 ಏಕದಿನ ಮತ್ತು 10 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಆಡಿರುವ ಒಶೇನ್ ಥಾಮಸ್, ಕ್ರಮವಾಗಿ 27 ಮತ್ತು 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 21ಕ್ಕೆ 5 ವಿಕೆಟ್ ಉರುಳಿಸಿರುವುದು ಅವರ ಶ್ರೇಷ್ಠ ಬೌಲಿಂಗ್ ಪ್ರದರ್ಶನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


