ಕ್ರಿಕೆಟ್

ಟೆಸ್ಟ್ ನಲ್ಲೂ ಹೀನಾಯ ಪ್ರದರ್ಶನ: ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 165 ರನ್‍ಗಳಿಗೆ ಮುಗ್ಗರಿಸಿದ ಭಾರತ

ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಸೋಲಿನ ನಂತರ ಇದೀಗ ಟೀಂ ಇಂಡಿಯಾ ಟೆಸ್ಟ್ ಪಂದ್ಯದಲ್ಲೂ ಹೀನಾಯ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ 165 ರನ್ ಗಳಿಗೆ ಸರ್ವಪತನ ಕಂಡಿದೆ.

ಟೆಸ್ಟ್ ನಲ್ಲೂ ಹೀನಾಯ ಪ್ರದರ್ಶನ: ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 165 ರನ್‍ಗಳಿಗೆ ಮುಗ್ಗರಿಸಿದ ಭಾರತ
ಸಂಗ್ರಹ ಚಿತ್ರ
Published On :

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಸೋಲಿನ ನಂತರ ಇದೀಗ ಟೀಂ ಇಂಡಿಯಾ ಟೆಸ್ಟ್ ಪಂದ್ಯದಲ್ಲೂ ಹೀನಾಯ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ 165 ರನ್ ಗಳಿಗೆ ಸರ್ವಪತನ ಕಂಡಿದೆ. 

ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ಮೊದಲ ದಿನದಾಟಕ್ಕೆ 55 ಓವರ್ ಗಳಲ್ಲಿ ಕೇವಲ 122 ರನ್ ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನ್ನು ಎರಡನೇ ದಿನ ಕೇವಲ 43 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿತು. 

ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಟೀಮ್ ಸೌಥಿ ಮತ್ತು ಜಮೈಸನ್ ಮಾರಕ ಬೌಲಿಂಗ್ ದಾಳಿ ನಡೆಸಿ ಇಬ್ಬರು ತಲಾ 4 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.