ನ್ಯೂಜಿಲೆಂಡ್ ಎದುರು ಭಾರತಕ್ಕೆ 10 ವಿಕೆಟ್‌ಗಳ ಹೀನಾಯ ಸೋಲು
ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ಅವರ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯರು 1-0 ಮುನ್ನಡೆ ಗಳಿಸಿದರು.

ವೆಲ್ಲಿಂಗ್ಟನ್: ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ಅವರ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯರು 1-0 ಮುನ್ನಡೆ ಗಳಿಸಿದರು.
ಇಲ್ಲಿನ ಬೇಸಿನ್ ರಿವರ್ ಅಂಗಳದಲ್ಲಿ ನಾಲ್ಕನೇ ದಿನವಾದ ಇಂದು, ಟಿಮ್ ಸೌಥಿ(61 ಕ್ಕೆ 5) ಹಾಗೂ ಟ್ರೆಂಟ್ ಬೌಲ್ಟ್(39 ಕ್ಕೆ 4) ಅವರ ಮಾರಕ ಬೌಲಿಂಗ್ ದಾಳಿಯಿಂದ ಭಾರತ ತಂಡವನ್ನು ದ್ವಿತೀಯ ಇನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಆತಿಥೇಯರು ಆಲೌಟ್ ಮಾಡಿದರು.
ಆ ಮೂಲಕ ಕೊಹ್ಲಿ ಪಡೆ ನೀಡಿದ್ದ ಕೇವಲ ಒಂಬತ್ತು ರನ್ ಗುರಿ ಮುಟ್ಟಿದ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ 100ನೇ ಪಂದ್ಯ ಗೆದ್ದು ಬೀಗಿತು.
100 ಟೆಸ್ಟ್ ಪಂದ್ಯಗಳು ಗೆದ್ದ ವಿಶ್ವದ ಏಳನೇ ತಂಡ ಎಂಬ ಸಾಧನೆಗೆ ಕೇನ್ ವಿಲಿಯಮ್ಸನ್ ಪಡೆ ಭಾಜನವಾಯಿತು.ಆರಂಭಿಕರಾದ ಟಾಮ್ ಬ್ಲಂಡೆಲ್ ಮತ್ತು ಟಾಮ್ ಲಥಾಮ್ ಜೋಡಿಯು 1.4 ಓವರ್‌ಗಳಲ್ಲಿಯೇ ತಂಡವನ್ನು ಗೆಲುವಿನ ದಡ ಸೇರಿಸಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


