ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆ ಬರೆದ ಮುಷ್ಫಿಕರ್ ರಹೀಮ್
ಬಾಂಗ್ಲಾದೇಶದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ಹಿರಿಯ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಮ್ ಭಾಜನರಾಗಿದ್ದಾರೆ.

ಢಾಕಾ: ಬಾಂಗ್ಲಾದೇಶದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ಹಿರಿಯ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಮ್ ಭಾಜನರಾಗಿದ್ದಾರೆ.
ಇಲ್ಲಿನ ಶೆರ್ ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ ಮೂರನೇ ದಿನ ಮುಷ್ಫಿಕರ್ ಈ ದಾಖಲೆ ಮಾಡಿದರು. 32ರ ಪ್ರಾಯದ ಬ್ಯಾಟ್ಸ್‌ಮನ್ ಸೋಮವಾರ ವೃತ್ತಿ ಜೀವನದ ಮೂರನೇ ದ್ವಿಶತಕ ಸಿಡಿಸಿದ್ದರು. ಇದೀಗ ಅವರು 70 ಟೆಸ್ಟ್ ಪಂದ್ಯಗಳಿಂದ ಒಟ್ಟು 4,413 ರನ್ ಗಳಿಸಿದ್ದಾರೆ. ಇದರಲ್ಲಿ ಏಳು ಶತಕಗಳು ಹಾಗೂ 21 ಅರ್ಧಶತಕಗಳು ಒಳಗೊಂಡಿವೆ.
ಆರಂಭಿಕ ಬ್ಯಾಟ್ಸ್‌ಮನ್ ತಮೀಮ್ ಇಕ್ಬಾಲ್ ಅವರು 60 ಟೆಸ್ಟ್ ಪಂದ್ಯಗಳಿಂದ 4,405 ರನ್ ದಾಖಲಿಸಿದ್ದು, ಎರಡನೇ ಸ್ಥಾನದಲ್ಲಿದ್ದಾರೆ. ಶಕೀಬ್ ಅಲ್ ಹಸನ್ ಅವರು 56 ಪಂದ್ಯಗಳಿಂದ 3,386 ರನ್ ಗಳಿಸಿ ನಂತರದ ಸ್ಥಾನ ಅಲಂಕರಿಸಿದ್ದಾರೆ. ಹಬಿಬುಲ್ಲಾ ಬಷಾರ್ 3026 ರನ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


