ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ
ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

ನವದೆಹಲಿ: ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.
ಈ ವಿಚಾರವನ್ನು ಸನ್ ರೈಸರ್ಸ್ ಹೈದ್ರಾಬಾದ್ ಪ್ರಾಂಚೈಸಿ ಇಂದು ಟ್ವೀಟರ್ ಮೂಲಕ ಸ್ಪಷ್ಪಪಡಿಸಿದೆ. ಡೇವಿಡ್ ವಾರ್ನರ್ ಅವರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.
ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕರಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಈ ಅವಕಾಶ ಒದಗಿಸಿದ್ದಕ್ಕೆ ಅಬಾರಿಯಾಗಿದ್ದೇನೆ. ಕಳೆದ ವರ್ಷ ನಾಯಕತ್ವ ವಹಿಸಿದ್ದ ಭುವನೇಶ್ವರ್ ಕುಮಾರ್ ಹಾಗೂ ಕೇನ್ ವಿಲಿಯಮ್ಸ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿ ಟ್ರೋಫಿ ಗೆಲ್ಲಲು ಎಲ್ಲ ರೀತಿಯ ಪ್ರಯತ್ನ ಪಡುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ.
ಕಳೆದ ವರ್ಷ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸ್ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಾಯಕರಾಗಿದ್ದರು. ಕೆಲವು ಪಂದ್ಯಗಳಿಗೆ ಭುವನೇಶ್ವರ್ ಕುಮಾರ್ ಕೂಡಾ ನಾಯಕತ್ವ ವಹಿಸಿಕೊಂಡಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ 1 ವರ್ಷ ನಿಷೇಧ ಶಿಕ್ಷೆ ಬಳಿಕ ಕಮ್ ಬ್ಯಾಕ್ ಆಗಿರುವ ಡೇವಿಡ್ ವಾರ್ನರ್ ಅದ್ಬುತ ಪ್ರದರ್ಶನ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


