ನನ್ನನ್ನು ರೂಪಿಸಿದ ಕೀರ್ತಿ 19 ವರ್ಷದೊಳಗಿನ ವಿಶ್ವಕಪ್ ಗೆ ಸಲ್ಲುತ್ತದೆ: ವಿರಾಟ್ ಕೊಹ್ಲಿ
ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮತ್ತು ಭಾರತವನ್ನು ಮೂರು ಮಾದರಿಯಲ್ಲಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನವದೆಹಲಿ: ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮತ್ತು ಭಾರತವನ್ನು ಮೂರು ಮಾದರಿಯಲ್ಲಿ ಮುನ್ನಡೆಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
19 ವರ್ಷದೊಳಗಿನವರ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ವಿರಾಟ್ ಬೆಳಕಿಗೆ ಬಂದರು. ವಿರಾಟ್ ನಾಯಕತ್ವದಲ್ಲಿ 2008 ರಲ್ಲಿ ಮಲೇಷ್ಯಾದಲ್ಲಿ ನಡೆದ ಅಂಡರ್ -19 ವಿಶ್ವಕಪ್ ಅನ್ನು ಭಾರತ ಗೆದ್ದುಕೊಂಡಿತು.
ಇದಕ್ಕೂ ಮೊದಲು ಭಾರತದ ಹಿರಿಯ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಸೆಪ್ಟೆಂಬರ್ 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ 20 ವಿಶ್ವಕಪ್ ಗೆದ್ದಿತ್ತು. ವಿಶ್ವಕಪ್ ವಿಜೇತ ಹಿರಿಯ ತಂಡ ಮತ್ತು 19 ವರ್ಷದೊಳಗಿನವರ ವಿಶ್ವಕಪ್ ವಿಜೇತ ಭಾರತೀಯ ತಂಡಕ್ಕೆ ಇಲ್ಲಿ ಗೌರವ ಸಮಾರಂಭವನ್ನು ನಡೆಸಲಾಯಿತು. ಅಲ್ಲಿ ಧೋನಿ ಮತ್ತು ವಿರಾಟ್ ಒಟ್ಟಿಗೆ ಕಾಣಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


