ಕ್ರಿಕೆಟ್

ಪೌರತ್ವ ಕಾಯ್ದೆ ಕುರಿತು ಬೇಜವಾಬ್ದಾರಿಯಿಂದ ಹೇಳಿಕೆ ನೀಡುವುದಿಲ್ಲ: ವಿರಾಟ್ ಕೊಹ್ಲಿ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸಂಪೂರ್ಣ ಮಾಹಿತಿಯಿಲ್ಲದೆ ಬೇಜವಾಬ್ದಾರಿಯ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೌರತ್ವ ಕಾಯ್ದೆ ಕುರಿತು ಬೇಜವಾಬ್ದಾರಿಯಿಂದ ಹೇಳಿಕೆ ನೀಡುವುದಿಲ್ಲ: ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Published On :

ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿರುವ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸಂಪೂರ್ಣ ಮಾಹಿತಿಯಿಲ್ಲದೆ ಬೇಜವಾಬ್ದಾರಿಯ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಶ್ರೀಲಂಕಾದ ವಿರುದ್ಧದ  ಮೊದಲ ಟಿ 20 ಪಂದ್ಯಾವಳಿಗೆ ಮುನ್ನ ಸುದ್ದಿಗೋಷ್ಠಿಯಲ್ಲಿ ಸಿಎಎ ಕುರಿತ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಈ ವಿಷಯದ ಕುರಿತು ನನಗೆ ಬೇಜವಾಬ್ದಾರಿಯಿಂದ ಮಾತನಾಡಲು ಬಯಸುವುದಿಲ್ಲ. ಕಾಯ್ದೆಯ ಅರ್ಥ, ಉದ್ದೇಶಗಳನ್ನು ಸಂಪೂರ್ಣವಾಗಿ ಅರಿತ ನಂತರ ಮಾತ್ರವೇ ಅದರ ಬಗ್ಗೆ ಅಭಿಪ್ರಾಯ ತಿಳಿಸಲು ನಾನು ಜವಾಬ್ದಾರನಾಗುತ್ತೇನೆ ಎಂದರು.

ಈ ಕುರಿತು ಒಬ್ಬರು ಒಂದು ಅಭಿಪ್ರಾಯ ವ್ಯಕ್ತಪಡಿಸಿದರೆ, ಇನ್ನೊಬ್ಬರು ಇನ್ನೊಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಆದ್ದರಿಂದ ಈ ಕುರಿತು ಯಾವುದೇ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಲು ತಾವು ಇಷ್ಟಪಡುವುದಿಲ್ಲ ಎಂದರು. 
ಟಿ20 ಪಂದ್ಯಾವಳಿಯ ಭದ್ರತಾ ವ್ಯವಸ್ಥೆಯ ಕುರಿತು ಪ್ರತಿಕ್ರಿಯಿಸಿದ ಕೊಹ್ಲಿ, ಈ ನಗರ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ರಸ್ತೆಗಳಲ್ಲಿ ಕೂಡ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.