ನಿವೃತ್ತಿಗಲ್ಲ, 1 ರನ್ ಹೊಡೆದಿದ್ದಕ್ಕೆ ದ್ರಾವಿಡ್‌ಗೆ ಪ್ರೇಕ್ಷಕರಿಂದ ನಿಂತು ಗೌರವ ವಂದನೆ, ವಿಡಿಯೋ!
ನಿವೃತ್ತಿ ಘೋಷಿಸಿದ ಕ್ರಿಕೆಟಿಗ ಆಡುವ ಕೊನೆಯ ಪಂದ್ಯದಲ್ಲಿ ಗೌರವ ಪೂರ್ವಕವಾಗಿ ಮೈದಾನದಲ್ಲಿ ಇತರ ಆಟಗಾರರು ನಿಂತು ಗೌರವ ವಂದನೆ ಸಲ್ಲಿಸಲಾಗುತ್ತದೆ. ಆದರೆ ವಿಚಿತ್ರವೆಂದರೆ ರಾಹುಲ್ ದ್ರಾವಿಡ್ ಅವರಿಗೆ 1 ರನ್ ಹೊಡೆದಿದ್ದಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ನಿಂತು ಗೌರವ ಸಲ್ಲಿಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ.

ಸಿಡ್ನಿ: ನಿವೃತ್ತಿ ಘೋಷಿಸಿದ ಕ್ರಿಕೆಟಿಗ ಆಡುವ ಕೊನೆಯ ಪಂದ್ಯದಲ್ಲಿ ಗೌರವ ಪೂರ್ವಕವಾಗಿ ಮೈದಾನದಲ್ಲಿ ಇತರ ಆಟಗಾರರು ನಿಂತು ಗೌರವ ವಂದನೆ ಸಲ್ಲಿಸಲಾಗುತ್ತದೆ. ಆದರೆ ವಿಚಿತ್ರವೆಂದರೆ ರಾಹುಲ್ ದ್ರಾವಿಡ್ ಅವರಿಗೆ 1 ರನ್ ಹೊಡೆದಿದ್ದಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ನಿಂತು ಗೌರವ ಸಲ್ಲಿಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ.
2008ರಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಅವರು ಸುಮಾರು 40 ಎಸೆತಗಳಲ್ಲಿ ಒಂದೂ ರನ್ ಪಡೆದಿದರಲಿಲ್ಲ. ನಂತರದ ಎಸೆತದಲ್ಲಿ 1 ರನ್ ದಾಖಲಿಸಿದ್ದಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ಎದ್ದು ನಿಂತು ಗೌರವ ವಂದನೆ ಸಲ್ಲಿಸಿದ್ದರು. ಈ ವಿಡಿಯೋವನ್ನು ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಬಿಡುಗಡೆ ಮಾಡಿದೆ.
ಇತ್ತೀಚೆಗೆ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಸಹ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ 39 ಡಾಟ್ ಬಾಲ್ ಆಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


